ಪತ್ತನಂತಿಟ್ಟ(ಕೇರಳ) :ಎರಡು ತಿಂಗಳ ವಾರ್ಷಿಕ ಮಂಡಲಂ-ಮಕರವಿಳಕ್ಕು ತೀರ್ಥಯಾತ್ರೆಗಾಗಿ ದಕ್ಷಿಣ ಭಾರತ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಶಬರಿಮಲೆಯ ಶ್ರೀ ಅಯ್ಯಪ್ಪ ದೇವಾಲಯದ ಬಾಗಿಲು ಇಂದು ತೆರೆಯಲಿದೆ. ವೃಶ್ಚಿಕ ಮಾಸದ ಮೊದಲ ದಿನವಾದ ನಾಳೆ (ನ. 17) ಶಬರಿಮಲೆ ಯಾತ್ರೆ ಆರಂಭವಾಗಲಿದೆ. ಹೀಗಾಗಿ ಸ್ವಾಮಿ ಅಯ್ಯಪ್ಪನ ದರ್ಶನ ಪಡೆಯಲು ಬರುವ ಲಕ್ಷಾಂತರ ಭಕ್ತರಿಗೆ ಸುಗಮ, ಸುರಕ್ಷಿತ ಯಾತ್ರೆಗಾಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ ಎಂದು ಕೇರಳ ರಾಜ್ಯ ಪೊಲೀಸ್ ಮುಖ್ಯಸ್ಥ (ಎಸ್‌ಪಿಸಿ) ಶೇಕ್ ದರ್ವೇಶ್ ಸಾಹೇಬ್ ಅವರು ಮಾಧ್ಯಮಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ.
ಸಿಸಿಟಿವಿ, ಡ್ರೋನ್ ಕ್ಯಾಮರಾ ಕಣ್ಗಾವಲು: ಒಟ್ಟು ಆರು ಹಂತಗಳಲ್ಲಿ ಸುಮಾರು 13 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗುವುದು. ಇದರಲ್ಲಿ ವಿಶೇಷ ಸಂವಹನ ತಂಡಗಳು ಕಾರ್ಯ ನಿರ್ವಹಿಸಲಿವೆ. ಅಲ್ಲದೆ, ಎರಡು ತಿಂಗಳ ಕಾಲ ನಡೆಯುವ ತೀರ್ಥೋದ್ಭವದ ಸಂದರ್ಭದಲ್ಲಿ ಮೂರು ತಾತ್ಕಾಲಿಕ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಪ್ರಮುಖ ಕಡೆಗಳಲ್ಲಿ 76 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಲ್ಲದೆ ಬೆಟ್ಟದ ಮೇಲಿನ ದೇಗುಲ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಭದ್ರತೆಯನ್ನು ಬಲಪಡಿಸಲು ಡ್ರೋನ್‌ಗಳನ್ನು ಹಾರಿಸಲಾಗುವುದು ಎಂದು ಎಸ್‌ಪಿಸಿ ತಿಳಿಸಿದ್ದಾರೆ.
ಇದನ್ನೂ ಓದಿ :ಶಬರಿಮಲೆ ಪ್ರಧಾನ ಅರ್ಚಕರ ಆಯ್ಕೆ ಸಿಂಧು: 'ಲಕ್ಕಿ ಡ್ರಾ' ಆಯ್ಕೆ ರದ್ಧತಿ ಕೋರಿ ಸಲ್ಲಿಸಿದ ಅರ್ಜಿ ವಜಾ