ಕರ್ನಾಟಕ

karnataka

ETV Bharat / bharat

ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಪತ್ನಿಗೆ ವಕೀಲ ಪತಿಯಿಂದ ಹಲ್ಲೆ: ಪೊಲೀಸರಿಗೆ ದೂರು

ಮಹಿಳಾ ಸಬ್ಇನ್ಸ್‌ಪೆಕ್ಟರ್‌ಗೆ ಪತಿ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

police sub-inspector was assaulted by her husband
ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಆಕೆಯ ಪತಿಯಿಂದ ಹಲ್ಲೆ

By

Published : Dec 12, 2022, 7:01 PM IST

Updated : Dec 12, 2022, 9:27 PM IST

ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಪತ್ನಿಗೆ ವಕೀಲ ಪತಿಯಿಂದ ಹಲ್ಲೆ

ನವ ದೆಹಲಿ:ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಆಗಿರುವ ಪತ್ನಿಗೆ ವೃತ್ತಿಯಲ್ಲಿ ವಕೀಲನಾಗಿರುವ ಪತಿ ಮನ ಬಂದಂತೆ ಥಳಿಸಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಆರೋಪಿ ಪತಿ, ಬರ್ವಾಲಾ ಗ್ರಾಮದ ನಿವಾಸಿ ತರುಣ್ ದಾಬಸ್ ವಿರುದ್ಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ನವೆಂಬರ್ 11 ರಂದು ಪತಿ ತನ್ನ ಸಹಚರರೊಂದಿಗೆ ಮೂರು ವಾಹನಗಳಲ್ಲಿ ಬಂದು ನನ್ನ ಮತ್ತು ಸಹೋದರಿಗೆ ಥಳಿಸಿ ಬೆದರಿಕೆ ಹಾಕಿದ್ದಾನೆ ಎಂದು ನಜಾಫ್‌ಗಢ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಘಟನೆಗೂ ಮುನ್ನ ಆಗಾಗ್ಗೆ ಆರೋಪಿ ಅನುಚಿತವಾಗಿ ವರ್ತಿಸಿ, ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿ ಮಹಿಳೆ ಜಂಟಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಇದಾದ ನಂತರ ತರುಣ್ ದಾಬಸ್ ನಿರಂತರವಾಗಿ ಕೊಲೆ ಬೆದರಿಕೆ ಹಾಕಲಾರಂಭಿಸಿದ್ದಾನೆ. ಹೀಗಾಗಿ ತನಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ತಿಳಿಸಿದ್ದಾರೆ.

ಹಲ್ಲೆಯ ವಿಡಿಯೋವನ್ನು ಟ್ವೀಟ್ ಮಾಡಿ, ನಾನು ದೆಹಲಿಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಆಗಿದ್ದು, ಹೆರಿಗೆ ರಜೆಯಲ್ಲಿದ್ದೇನೆ. ಈ ಸಮಯದಲ್ಲಿ ನನ್ನ ಪತಿ ವಕೀಲರಾದ ತರುಣ್ ದಾಬಾಸ್ ಮನೆಗೆ ಬಂದು ನನ್ನನ್ನು ನಿರ್ದಯವಾಗಿ ಥಳಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಈ ಘಟನೆಯ ಕುರಿತು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, 'ಸಹಾಯ ಪಡೆಯಲು ಪೊಲೀಸರೇ ಒತ್ತಾಯಿಸಿದ್ದಾರೆ! ನಾನು ದೆಹಲಿ ಪೊಲೀಸರಿಗೆ ನೋಟಿಸ್ ನೀಡುತ್ತಿದ್ದೇನೆ. ಕಠಿಣ ಕ್ರಮ ಕೈಗೊಳ್ಳಬೇಕು. ಪೊಲೀಸರು ಸುರಕ್ಷಿತವಾಗಿಲ್ಲದಿದ್ದರೆ ಸಾಮಾನ್ಯ ಮಹಿಳೆಯರು ಹೇಗೆ ಸುರಕ್ಷಿತವಾಗಿರುತ್ತಾರೆ? ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಹೆಂಡತಿ ನಿಂದನೆ: ಆಡಿಯೋ ವೈರಲ್​ ಬೆನ್ನಲ್ಲೇ ಗಂಡ ಆತ್ಮಹತ್ಯೆ

Last Updated : Dec 12, 2022, 9:27 PM IST

ABOUT THE AUTHOR

...view details