ಕರ್ನಾಟಕ

karnataka

ETV Bharat / bharat

ಕುಲ್ಗಾಮ್‌ನಲ್ಲಿ ಉಗ್ರರ ಗ್ರೆನೇಡ್ ದಾಳಿಗೆ ಪೊಲೀಸ್ ಸಿಬ್ಬಂದಿ ಸಾವು - Etv Bharat Kannada news

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ.

policeman-killed-in-kulgam-in-jammu-and-kashmir-in-grenade-attack
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಗ್ರೆನೇಡ್ ದಾಳಿ.. ಪೊಲೀಸ್ ಸಿಬ್ಬಂದಿ ಸಾವು

By

Published : Aug 14, 2022, 12:13 PM IST

ಕುಲ್ಗಾಮ್ (ಜಮ್ಮು ಮತ್ತು ಕಾಶ್ಮೀರ): ಗ್ರೆನೇಡ್ ದಾಳಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಕುಲ್ಗಾಮ್‌ನ ಖೈಮೋಹ್‌ನಲ್ಲಿ ಕಳೆದ ರಾತ್ರಿ ನಡೆದಿದೆ. ಪೂಂಚ್‌ನ ಮೆಂಧರ್‌ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ತಾಹಿರ್ ಖಾನ್ ಮೃತಪಟ್ಟವರು. ಈ ಹಿಂದೆ ರಜೌರಿ ಜಿಲ್ಲೆಯ ಸೇನಾ ಶಿಬಿರದ ಮೇಲೆ ಇಬ್ಬರು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿ ನಾಲ್ವರು ಸೈನಿಕರನ್ನು ಬಲಿ ಪಡೆದಿದ್ದರು.

ಪಾಕಿಸ್ತಾನದ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಉಗ್ರರ ಮೇಲೆ ಸೇನೆ ಪ್ರತಿದಾಳಿ ನಡೆಸಿ ಹಿಮ್ಮೆಟ್ಟಿಸಿದೆ. 76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಡ್ರೋನ್‌ಗಳು, ಸ್ನೈಪರ್‌ಗಳು ಮತ್ತು ಮಪ್ತಿಯಲ್ಲಿರುವ ಪೊಲೀಸರನ್ನು ಕಣ್ಗಾವಲಿಗೆ ನಿಯೋಜಿಸಲಾಗಿದೆ. ಹಲವು ಸ್ಥಳಗಳಲ್ಲಿ ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಇದನ್ನೂ ಓದಿ:ಮಡಕೆ ನೀರು ಕುಡಿದಿದ್ದಕ್ಕೆ ಶಿಕ್ಷಕನಿಂದ ಥಳಿತಕ್ಕೊಳಗಾದ ಬಾಲಕ ಸಾವು

ABOUT THE AUTHOR

...view details