ಶ್ರೀನಗರ(ಜಮ್ಮು-ಕಾಶ್ಮೀರ):ಉಗ್ರರ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಅರ್ಷಿದ್ ಅಹ್ಮದ್ ಹುತಾತ್ಮರಾಗಿದ್ದಾರೆ. ಅವರ ಅಂತಿಮ ಸಂಸ್ಕಾರದ ವೇಳೆ ಅಧಿಕಾರಿಗಳು ಸೇರಿ ಸಾವಿರಾರು ಜನರು ಭಾಗಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಬಳಿಕ ಮಾತನಾಡಿದ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್, ಈಗಾಗಲೇ ಆರೋಪಿಗಳ ಗುರುತು ಪತ್ತೆ ಹಚ್ಚಲಾಗಿದೆ. ಶೀಘ್ರದಲ್ಲೇ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು ಎಂದರು.
ಶ್ರೀನಗರದ ಖನ್ಯಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗಿದ್ದ ಚೆಕ್ಪೋಸ್ಟ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ, ದುಷ್ಕರ್ಮಿಗಳು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಎಸ್ಐ) ಅರ್ಷಿದ್ ಅಹ್ಮದ್ ತಲೆಗೂ ಗುಂಡು ಹಾರಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದರು.