ಮೀರತ್(ಉತ್ತರಪ್ರದೇಶ) :ಉತ್ತರಪ್ರದೇಶ ವಿಧಾನಸಭೆ ಚುನಾವಣಾ ಕಣ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ರಂಗೇರಿದೆ. ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ಮಧ್ಯೆ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ.
ಉತ್ತರಪ್ರದೇಶದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಟ ನಡೆಸಲು ಪ್ರಮುಖ ಪ್ರತಿಪಕ್ಷವಾದ ಸಮಾಜವಾದಿ ಪಕ್ಷ(ಎಸ್ಪಿ) ಮತ್ತು ರಾಷ್ಟ್ರೀಯ ಲೋಕದಳ(ಆರ್ಎಲ್ಡಿ) ಮಧ್ಯೆ ಮೈತ್ರಿ ಮಾಡಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಚುನಾವಣೆಗೆ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿರುವ ಉಭಯ ಪಕ್ಷಗಳ ನಾಯಕರು, ಇಂದು ಮೀರತ್ನಲ್ಲಿ ಬೃಹತ್ ಜಂಟಿ ರ್ಯಾಲಿ ನಡೆಸಿದರು. ರ್ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಿರುವುದು ನಾಯಕರನ್ನು ಹುರಿದುಂಬಿಸಿದೆ.