ಲೂದಿಯಾನ: ಇಡೀ ದೇಶ ಭಾರಿ ಕುತೂಹಲದಿಂದ ಕಾಯುತ್ತಿರುವ ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಾಳೆ ಹೊರಬೀಳಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ನಡುಕ ಶುರುವಾಗಿದೆ. ನಾಳೆ ಮಧ್ಯಾಹ್ನದ ವೇಳೆಗೆ ಐದು ರಾಜ್ಯಗಳ ಸ್ಪಷ್ಟ ಫಲಿತಾಂಶ ತಿಳಿಯಲಿದೆ. ಈ ನಡುವೆ ಪಂಜಾಬ್‌ನಲ್ಲಿ ವಿವಿಧ ರಾಜಕೀಯ ಪಕ್ಷಗಳು ಸಹಿ ಹಂಚಿ ಸಂಭ್ರಮಿಸಲು ಲಡ್ಡುಗೆ ಆರ್ಡರ್ ಮಾಡಿದ್ದಾರೆ.
ನಾಳೆ ಪಂಚರಾಜ್ಯಗಳ ಚುನಾವಣೆ ಫಲಿತಾಂಶ; ಪಂಜಾಬ್‌ನಲ್ಲಿ ಲಡ್ಡುಗೆ ಭಾರಿ ಬೇಡಿಕೆ ಲೂದಿಯಾನದಲ್ಲಿ ಬೇಕರಿ ಹಾಗೂ ಸಿಹಿ ಅಂಗಡಿಗಳಲ್ಲಿ ವಿಶೇಷ ಆದ್ಯತೆ ಮೇರೆಗೆ ಹೆಚ್ಚಿನ ಸಿಬ್ಬಂದಿ ನೂರಾರು ಲಡ್ಡು ತಯಾರಿಕೆಯಲ್ಲಿ ಬ್ಯೂಸಿಯಾಗಿದ್ದಾರೆ. ಪಂಜಾಬ್‌ನಲ್ಲಿ ಒಟ್ಟು 117 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತಕ್ಕೆ 59 ಮ್ಯಾಜಿಕ್ ಸಂಖ್ಯೆಯಾಗಿದೆ.
ಮತದಾನೋತ್ತರ ಸಮೀಕ್ಷೆಗಳಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ಪಕ್ಷ ಪಂಜಾಬ್‌ನಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಹೇಳಲಾಗಿದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಇತರ ಪಕ್ಷಗಳಲ್ಲಿ ಬಿಸಿ ಬಿಸಿ ಚರ್ಚೆ ಶುರುವಾಗಿದೆ. ಗೋವಾ, ಪಂಜಾಬ್ ಹಾಗೂ ಉತ್ತರಾಖಂಡ್‌ನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆದರೆ, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಒಟ್ಟು 7 ಹಂತಗಳಲ್ಲಿ ನಡೆದಿತ್ತು.
ಇದನ್ನೂ ಓದಿ:ಅಧಿಕಾರಿಗಳಿಂದ ವೋಟಿಂಗ್ ಮಷಿನ್ ಟ್ಯಾಂಪರಿಂಗ್, ಅಭ್ಯರ್ಥಿಗಳಿಗೆ ಮಾಹಿತಿ ನೀಡದೇ ಸಾಗಾಟ: ಅಖಿಲೇಶ್