ಮಲಪ್ಪುರಂ(ಕೇರಳ): ಕಳೆದ ಕೆಲ ದಿನಗಳಿಂದ ಕೇರಳದ ವಿವಿಧ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗ್ತಿದ್ದು, ಜನರು ವಿಪರೀತ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವು ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿ ಬಿದ್ದು, ನೀರು ತುಂಬಿ ತುಳುಕುತ್ತಿದೆ. ವಾಹನ ಸವಾರರ ಪಡಿಪಾಟಲು ಹೇಳತೀರದಾಗಿದೆ.
ಇದರ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳ ಗಮನ ಸೆಳೆಯುವ ಉದ್ದೇಶದಿಂದ ವ್ಯಕ್ತಿಯೋರ್ವ ರಸ್ತೆ ಮಧ್ಯದಲ್ಲಿನ ಗುಂಡಿಯಲ್ಲೇ ಸ್ನಾನ ಮಾಡಿದ್ದಾನೆ. ಈತನನ್ನು ಹಮ್ಜಾ ಪೊರಾಲಿ ಎಂದು ಗುರುತಿಸಲಾಗಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆಯಿತು. ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ವ್ಯಕ್ತಿಯೋರ್ವ ಬಕೆಟ್, ಮಗ್, ಸೋಪು ಮತ್ತು ಟವೆಲ್ ತೆಗೆದುಕೊಂಡು ಬಂದು ಮಳೆ ನೀರಿನಿಂದ ತುಂಬಿರುವ ರಸ್ತೆ ಗುಂಡಿಯಲ್ಲಿ ಸ್ನಾನ ಮಾಡಿರುವುದನ್ನು ನೀವು ನೋಡಬಹುದು. ಈ ಸಂದರ್ಭದಲ್ಲಿ ವಾಹನ ಸವಾರರು ಈ ರಸ್ತೆಯಲ್ಲಿ ಹಾಯ್ದು ಹೋಗಿದ್ದಾರೆ. ವಿಶೇಷ ರೀತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಸ್ಥಳೀಯ ಶಾಸಕ ಯು.ಎ.ಲತೀಫ್ ಭೇಟಿ ನೀಡಿದ್ದಾರೆ. ಈ ವೇಳೆ ವ್ಯಕ್ತಿ ನೀರಿನಲ್ಲೇ ಧ್ಯಾನದ ಭಂಗಿಯಲ್ಲಿ ಕುಳಿತುಕೊಂಡಿದ್ದಾನೆ.
ಇದನ್ನೂ ಓದಿ:ಬೆಂಗಳೂರಲ್ಲೇ 576 ಕಿ.ಮೀ ರಸ್ತೆ ಗುಂಡಿ ಮುಚ್ಚುವ ಕಾರ್ಯ ಬಾಕಿ..!
ಇತ್ತೀಚೆಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ ರಸ್ತೆ ಗುಂಡಿಗೆ ಬಿದ್ದು ವ್ಯಕ್ತಿಯೋರ್ವ ಪ್ರಾಣ ಕಳೆದುಕೊಂಡಿದ್ದ.