ಮುಂಬೈ:ಪೋರ್ನೋಗ್ರಫಿ(ಅಶ್ಲೀಲ ಚಿತ್ರ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೆ ಒಳಗಾಗಿರುವ ರಾಜ್ ಕುಂದ್ರಾ ಅವರ ಕಂಪನಿಯ ನಿರ್ದೇಶಕರೊಬ್ಬರನ್ನು ಮುಂಬೈ ಪೊಲೀಸ್ ಅಪರಾಧ ವಿಭಾಗವು ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅಭಿಜೀತ್ ಬೊಂಬಲ್ ಬಂಧಿತ ನಿರ್ದೇಶಕನಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಪಟ್ಟಿಯಲ್ಲಿ ಅಭಿಜೀತ್ ಅವರ ಹೆಸರನ್ನು ಈ ಮೊದಲೇ ಸೇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಅಶ್ಲೀಲ ಚಿತ್ರ ನಿರ್ಮಾಣ ಮಾಡಿ ಅವುಗಳನ್ನು ಕೆಲ ಆ್ಯಪ್ಗಳಲ್ಲಿ ಪ್ರಕಟಿಸುತ್ತಿದ್ದ ಆರೋಪ ರಾಜ್ ಕುಂದ್ರಾ ಮೇಲಿದ್ದು, ಹಿಂದಿನ ತಿಂಗಳಷ್ಟೇ ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಸಂಬಂಧ ಸಾಕಷ್ಟು ಸಾಕ್ಷ್ಯಾಧಾರಗಳು ಸಿಕ್ಕಿದ್ದು, ಆರೋಪಿಗಳ ಪಟ್ಟಿಯಲ್ಲಿದ್ದ ಅಭಿಜೀತ್ ಬೊಂಬಾಲ್ ಅವರನ್ನು ಬಂಧಿಸಲಾಗಿದೆ.
ಫೆಬ್ರವರಿ ತಿಂಗಳಲ್ಲಿ ಕುಂದ್ರಾ ವಿರುದ್ಧ ಈ ಸಂಬಂಧ ದೂರು ದಾಖಲಾಗಿತ್ತು. ಬಳಿಕ ತಮ್ಮ ಮೇಲಿನ ಆರೋಪ ತಳ್ಳಿ ಹಾಕಿದ್ದ ರಾಜ್ ಕುಂದ್ರಾ, ನಿರೀಕ್ಷಣಾ ಜಾಮೀನು ತೆಗೆದುಕೊಂಡಿದ್ದರು. ಹಿಂದಿನ ತಿಂಗಳು ರಾಜ್ ಕುಂದ್ರಾರನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ:ಅಫ್ಘಾನಿಸ್ತಾನದ ಮೂರನೇ ಒಂದು ಭಾಗವೀಗ ತಾಲಿಬಾನ್ ವಶ: ಯುದ್ಧಪೀಡಿತ ದೇಶದ ಸಂಪೂರ್ಣ ಚಿತ್ರಣ ಇಲ್ಲಿದೆ..