ಲಖನೌ: ಲಖನೌ ವಿಶ್ವವಿದ್ಯಾಲಯದ (ಎಲ್‌ಯು) ಪ್ರಾಚೀನ ಭಾರತೀಯ ಇತಿಹಾಸ ಮತ್ತು ಪುರಾತತ್ವ (ಎಐಎಚ್‌ಎ) ವಿಭಾಗದ ಪದವಿ ಪೂರ್ವ ವಿದ್ಯಾರ್ಥಿಗಳು ರಚಿಸಿದ ವಾಟ್ಸ್ಆ್ಯಪ್ಗುಂಪಿನಲ್ಲಿ ಅಶ್ಲೀಲ ಚಿತ್ರಗಳು ಮತ್ತು ಅಶ್ಲೀಲ ಸಂದೇಶಗಳು ಹರಿದಾಡಿದ್ದು, ವಿದ್ಯಾರ್ಥಿಗಳು ತೀವ್ರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ವಿಶ್ವವಿದ್ಯಾಲಯದ ಮುಖ್ಯ ಮೇಲ್ವಿಚಾರಕ ಹಸಂಗಂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಅಶ್ಲೀಲ ವಿಷಯಗಳನ್ನು ಹರಿಬಿಟ್ಟ ದುಷ್ಕರ್ಮಿ ಯಾರೆಂದು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ. ತರಗತಿಗೆ ಸಂಬಂಧಿಸಿದ ವಿಷಯಗಳನ್ನು ಹಂಚಿಕೊಳ್ಳಲು ಅಧ್ಯಾಪಕರ ನಿರ್ದೇಶನದ ಮೇರೆಗೆ ವಿದ್ಯಾರ್ಥಿನಿಯೊಬ್ಬರು ರಚಿಸಿದ ವಾಟ್ಸ್ಆ್ಯಪ್ ಗುಂಪಿನಲ್ಲಿ ಶನಿವಾರ ತಡರಾತ್ರಿ ಅಶ್ಲೀಲ ಚಿತ್ರಗಳು ಮತ್ತು ಅಶ್ಲೀಲ ಸಂದೇಶಗಳನ್ನು ಪೋಸ್ಟ್ ಮಾಡಲಾಗಿದೆ.