ಕರ್ನಾಟಕ

karnataka

ಅಶ್ಲೀಲ ಚಿತ್ರ ನಿರ್ಮಾಣ ಆರೋಪ: ನಟಿ Shilpa Shetty ಪತಿ ರಾಜ್ ಕುಂದ್ರಾ ಅರೆಸ್ಟ್

By

Published : Jul 19, 2021, 11:38 PM IST

Updated : Jul 20, 2021, 5:37 AM IST

ಅಶ್ಲೀಲ ಚಿತ್ರ ನಿರ್ಮಾಣ ಆರೋಪದ ಸಂಬಂಧ ಬಂಧಿತರಾಗಿರುವ Shilpa Shetty ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಕ್ರೈಂ ಬ್ರ್ಯಾಂಚ್​​ ಪೊಲೀಸರು ವಿಚಾರಣೆ ನಡೆಸಿದ್ದಾರೆ

ರಾಜ್ ಕುಂದ್ರಾ ಅರೆಸ್ಟ್
ರಾಜ್ ಕುಂದ್ರಾ ಅರೆಸ್ಟ್

ಮುಂಬೈ:ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರನ್ನು ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಅಶ್ಲೀಲ ಚಿತ್ರ ನಿರ್ಮಾಣ ಮಾಡಿ ಅವುಗಳನ್ನು ಕೆಲ ಆ್ಯಪ್​ಗಳಲ್ಲಿ ಪ್ರಕಟಿಸುತ್ತಿದ್ದ ಆರೋಪ ರಾಜ್ ಕುಂದ್ರಾ ಮೇಲಿದೆ. ಈ ಪ್ರಕರಣ ಸಂಬಂಧ ಸಾಕಷ್ಟು ಸಾಕ್ಷ್ಯಾಧಾರಗಳು ಸಿಕ್ಕಿದ್ದು, ರಾಜ್ ಕುಂದ್ರಾರನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ.

ರಾಜ್ ಕುಂದ್ರಾ ಅರೆಸ್ಟ್

ಬಂಧನದ ಬಳಿಕ ರಾಜ್ ಕುಂದ್ರಾ ಅವರನ್ನು ವೈದ್ಯಕೀಯ ಪರೀಕ್ಷೆಗಾಗಿ ಜೆಜೆ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಮುಂಬೈ ಪೊಲೀಸ್ ಆಯುಕ್ತರ ಕಚೇರಿಗೆ ಕರೆತರಲಾಗಿದೆ.

ಫೆಬ್ರುವರಿ ತಿಂಗಳಲ್ಲಿ ರಾಜ್ ಕುಂದ್ರಾ ವಿರುದ್ಧ ಈ ಸಂಬಂಧ ದೂರು ದಾಖಲಾಗಿತ್ತು. ಬಳಿಕ ತಮ್ಮ ಮೇಲಿನ ಆರೋಪ ತಳ್ಳಿ ಹಾಕಿದ್ದ ರಾಜ್ ಕುಂದ್ರಾ, ನಿರೀಕ್ಷಣಾ ಜಾಮೀನು ತೆಗೆದುಕೊಂಡಿದ್ದರು.

Last Updated : Jul 20, 2021, 5:37 AM IST

ABOUT THE AUTHOR

...view details