ಕರ್ನಾಟಕ

karnataka

ETV Bharat / bharat

Blue Film Case​​: ರಾಜ್ ಕುಂದ್ರಾಗೆ ರಿಲೀಫ್​ ನೀಡಲು ಬಾಂಬೆ ಹೈಕೋರ್ಟ್​ ನಿರಾಕರಣೆ

ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ರಾಜ್ ಕುಂದ್ರಾ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದ್ದು, ಬಂಧನ ಸಮರ್ಥನೀಯ ಎಂದು ಅಭಿಪ್ರಾಯಪಟ್ಟಿದೆ.

Pornography case
Pornography case

By

Published : Aug 7, 2021, 12:21 PM IST

ಮುಂಬೈ:ಅಶ್ಲೀಲ ವಿಡಿಯೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಬಂಧನದ ಆದೇಶವನ್ನು ಪ್ರಶ್ನಿಸಿ ಮತ್ತು ತಕ್ಷಣ ಬಿಡುಗಡೆ ಮಾಡುವಂತೆ ಕೋರಿ ಉದ್ಯಮಿ ರಾಜ್ ಕುಂದ್ರಾ ಮತ್ತು ಅವರ ಸಹವರ್ತಿ ರಯಾನ್ ಥಾರ್ಪೆ ಸಲ್ಲಿಸಿದ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ಇಂದು ವಜಾಗೊಳಿಸಿದೆ.

ಲಂಡನ್ ಮೂಲದ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು, ಮೊಬೈಲ್ ಆ್ಯಪ್ ಮೂಲಕ ಅಶ್ಲೀಲ ವಿಡಿಯೋ ಸ್ಟ್ರೀಮಿಂಗ್ ಮಾಡುವ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂಬ ಆರೋಪದಡಿ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್​ ಕುಂದ್ರಾ ಮತ್ತು ರಯಾನ್ ಥಾರ್ಪೆ ಸೇರಿ 11 ಮಂದಿಯನ್ನು ಜುಲೈ 19 ರಂದು ಮುಂಬೈ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ:Pornography case: ಸತತ 8 ಗಂಟೆ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾ ವಿಚಾರಣೆ

ಜುಲೈ 27 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ಆಗಸ್ಟ್ 5 ರಂದು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನೂ ತಿರಸ್ಕರಿಸಿತ್ತು.

ಇದನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್​ಗೆ ಆರೋಪಿಗಳು ಅರ್ಜಿ ಸಲ್ಲಿಸಿದ್ದು, ಇದನ್ನು ನ್ಯಾಯಾಲಯ ವಜಾಗೊಳಿಸಿದೆ. ಅಲ್ಲದೇ ರಾಜ್ ಕುಂದ್ರಾ ಮತ್ತು ರಯಾನ್ ಥಾರ್ಪೆ ಅವರ ಬಂಧನವೂ ಸಮರ್ಥನೀಯ ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ.

ABOUT THE AUTHOR

...view details