ಮುಂಬೈ (ಮಹಾರಾಷ್ಟ್ರ):ಅಶ್ಲೀಲ ಚಿತ್ರ ನಿರ್ಮಾಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾಶೆಟ್ಟಿ ಪತಿ, ಉದ್ಯಮಿ ರಾಜ್ಕುಂದ್ರಾ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಿಚಾರಣೆ ನಡೆಸಲಿದೆ. ಪ್ರಕರಣ ಸಂಬಂಧ ರಾಜ್ಕುಂದ್ರಾ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ.
ಅಶ್ಲೀಲ ಚಿತ್ರಗಳ ನಿರ್ಮಾಣ ಸಂಬಂಧ ಜುಲೈ 19 ರಂದು ಮುಂಬೈ ಪೊಲೀಸರು ರಾಜ್ಕುಂದ್ರಾ ಸೇರಿ 11 ಜನರನ್ನು ಬಂಧಿಸಿದ್ದರು. ಈ ಮಧ್ಯೆ ರಾಜ್ ಕುಂದ್ರಾ ಮತ್ತು ಶಿಲ್ಪಾಶೆಟ್ಟಿ ಅವರ ಆರ್ಥಿಕ ಮೂಲ ಮತ್ತು ಅಶ್ಲೀಲ ಚಿತ್ರಗಳ ದಂಧೆ ಪ್ರಕರಣದಲ್ಲಿ ಅವರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಸಲು ಮುಂಬೈ ಕ್ರೈಂ ಬ್ರಾಂಚ್ ಹಣಕಾಸು ಲೆಕ್ಕ ಪರಿಶೋಧಕರನ್ನು ನೇಮಿಸಿದೆ.
ತನಿಖೆಯಲ್ಲಿ ಶಿಲ್ಪಾಶೆಟ್ಟಿ ಮತ್ತು ರಾಜ್ಕುಂದ್ರಾ ಅವರ ಜಂಟಿ ಖಾತೆಯಿಂದ ಕೋಟ್ಯಂತರ ರೂಪಾಯಿ ವಹಿವಾಟು ನಡೆದಿದೆ ಎಂದು ತಿಳಿದು ಬಂದಿದೆ. ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡುತ್ತಿದ್ದ ಆ್ಯಪ್‌ಗಳಿಂದ ಈ ಆದಾಯ ಬಂದಿದೆ ಎಂದು ಅಪರಾಧ ಶಾಖೆ ಶಂಕಿಸಿದೆ.