ಪೊಂಡೂರು (ಆಂಧ್ರಪ್ರದೇಶ):ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪೊಂಡೂರಿನಲ್ಲಿ ಜವಳಿ ಕ್ಲಸ್ಟರ್ ಸ್ಥಾಪಿಸುವ ಸಾಧ್ಯತೆ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿದ್ದಾರೆ.
ರಾಷ್ಟ್ರೀಯ ಕೈಮಗ್ಗ ದಿನಾಚರಣೆ ನಿಮಿತ್ತ ಪೊಂಡೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಿರ್ಮಲಾ ಸೀತಾರಾಮನ್, ''ಪೊಂಡೂರು ಖದ್ದರ್'' (ಖಾದಿ), ಇದು ಆಂಧ್ರಪ್ರದೇಶದ ಅತ್ಯಂತ ಪ್ರಸಿದ್ಧ ಕೈಮಗ್ಗ ಬ್ರಾಂಡ್‌ಗಳಲ್ಲಿ ಒಂದಾಗಿದೆ ಮತ್ತು ಜಾಗತಿಕವಾಗಿ ಹೆಸರುವಾಸಿಯಾಗಿದೆ. ಪೊಂಡೂರಿನಲ್ಲಿ ಜವಳಿ ಕ್ಲಸ್ಟರ್ ಸ್ಥಾಪಿಸುವ ಬಗ್ಗೆ ಕೇಂದ್ರ ಜವಳಿ ಸಚಿವರೊಂದಿಗೆ ಮಾತನಾಡುವೆ ಎಂದು ಹೇಳಿದ್ದಾರೆ.