ನವದೆಹಲಿ :ನೀಟ್ ಪರೀಕ್ಷೆ ಮುಂದೂಡಿಕೆ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪರೀಕ್ಷೆ ಮುಂದೂಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, "ವಿದ್ಯಾರ್ಥಿಗಳ ಸಂಕಷ್ಟದಲ್ಲಿ ಭಾರತ ಸರ್ಕಾರ ಕುರುಡಾಗಿದೆ. ನೀಟ್ ಪರೀಕ್ಷೆಯನ್ನು ಮುಂದೂಡಿ. ವಿದ್ಯಾರ್ಥಿಗಳಿಗೆ ನ್ಯಾಯಯುತ ಅವಕಾಶ ಸಿಗಲಿ" ಎಂದು ಹೇಳಿದ್ದಾರೆ.
ಸೆಪ್ಟೆಂಬರ್ 12ಕ್ಕೆ ನೀಟ್ ಪರೀಕ್ಷೆ ನಿಗದಿಯಾಗಿದೆ. ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಆದರೆ, ನೀಟ್ ಪರೀಕ್ಷೆ ದಿನದ ಆಸುಪಾಸಿನಲ್ಲೇ ಸಿಬಿಎಸ್ಇ, ಕರ್ನಾಟಕದ ಕಾಮೆಡ್ಕೆ (CoMEDK Exam), ಒಡಿಶಾದಲ್ಲಿ ಜೆಇಇ ಹಾಗೂ ಮಧ್ಯಪ್ರದೇಶದ 12ನೇ ತರಗತಿ ಪರೀಕ್ಷೆಗಳಿವೆ.