ಮಣಿಪುರ(ಉತ್ತರಪ್ರದೇಶ):ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಬಾಲಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಅಮಾನವೀಯ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಆರೋಪಿ ಪತಿ ಮತ್ತು ಕುಟುಂಬದ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
ಮೂರು ತಿಂಗಳ ಹಿಂದೆ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ಮಾಡಿದ್ದ. ಈಗ ಬಾಲಕಿ ಗರ್ಭಿಣಿಯಾಗಿದ್ದು, ಪಂಚಾಯಿತಿಯಲ್ಲಿ ವಾದ ನಡೆದು ಆರೋಪಿಗೇ ಆಕೆಯನ್ನು ವಿವಾಹ ಮಾಡಿಕೊಡಲಾಗಿತ್ತು. ಮನೆಗೆ ಕರೆದೊಯ್ದ ಪತಿಯ ಕಡೆಯವರು ಬಳಿಕ ಗರ್ಭಿಣಿ ಬಾಲಕಿಯ ಮೇಲೆ ಹಲ್ಲೆ ಮಾಡಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ್ದಾರೆ. ಬಾಲಕಿ ಸುಟ್ಟ ಗಾಯಗಳಿಂದ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.