ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈಗ ಆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಯಿಂದ ರಾಷ್ಟ್ರಪತಿ ಅವರು ಡಿಸ್ಚಾರ್ಜ್ ಆಗಿದ್ದಾರೆ.
ಮುರ್ಮು ತಮ್ಮ ಬಲಗಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಭಾನುವಾರ ಬೆಳಗ್ಗೆ ಸೇನಾ ಆಸ್ಪತ್ರೆಯಲ್ಲಿ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ಕಾರಣ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.