ಕರ್ನಾಟಕ

karnataka

ETV Bharat / bharat

44 ಶಿಕ್ಷಕರಿಗೆ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ - ಶಿಕ್ಷಕರ ದಿನಾಚರಣೆ

ಶಿಕ್ಷಕರ ದಿನಾಚರಣೆ ಹಿನ್ನೆಲೆ ಇಂದು 44 ಶಿಕ್ಷಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

President Kovind
President Kovind

By

Published : Sep 5, 2021, 1:53 PM IST

ನವದೆಹಲಿ: ಶಿಕ್ಷಕರ ದಿನಾಚರಣೆ ಹಿನ್ನೆಲೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಇಂದು 44 ಮಂದಿ ಶಿಕ್ಷಕರಿಗೆ 2021 ನೇ ಸಾಲಿನ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ರಾಷ್ರಪತಿ ಕೋವಿಂದ್ ಅವರು, ವರ್ಚುವಲ್ ಸಮಾವೇಶದ ಮೂಲಕ ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ತೆಲಂಗಾಣ, ಸಿಕ್ಕೀಂ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ಬಿಹಾರ ಮತ್ತು ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಬಳಿಕ ಮಾತನಾಡಿರುವ ಅವರು, ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ತತ್ವಜ್ಞಾನಿ ಹಾಗೂ ವಿದ್ವಾಂಸರೆಂದೇ ಪ್ರಸಿದ್ಧಿ ಪಡೆದಿದ್ದವರು. ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದು, ಎಲ್ಲರ ಮನಸ್ಸಿನಲ್ಲಿ ಉತ್ತಮ ಶಿಕ್ಷಕರಾಗಿ ಉಳಿದುಕೊಂಡಿದ್ದಾರೆ ಅಂತಾ ಹೇಳಿದರು.

ಮಾಜಿ ರಾಷ್ಟ್ರಪತಿ ಡಾ.ಎಸ್. ರಾಧಾಕೃಷ್ಣನ್ ಹುಟ್ಟಹಬ್ಬದ ಪ್ರಯುಕ್ತ ದೇಶಾದ್ಯಂತ ಇಂದು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.

ರಾಧಾಕೃಷ್ಣನ್ ಅವರು ತತ್ವಜ್ಞಾನಿ ಮತ್ತು ಖ್ಯಾತ ಲೇಖಕರು ಕೂಡ ಆಗಿದ್ದರು, ಭಾರತದ ಎರಡನೇ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದರು. ಸೆಪ್ಟೆಂಬರ್ 5, 1888 ಜನಿಸಿದ ಅವರು, ಶಿಕ್ಷಣ ಕ್ಷೇತ್ರಕ್ಕೆ ಅದ್ವಿತೀಯ ಕೊಡುಗೆ ನೀಡಿದ್ದಾರೆ. ಅವರ ಗೌರವಾರ್ಥ 1962 ರಿಂದ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತದೆ.

ಇದನ್ನೂ ಓದಿ: ವಿಶ್ವದ 13 ಪ್ರಭಾವಿ ನಾಯಕರ ಪೈಕಿ ಪ್ರಧಾನಿ ನರೇಂದ್ರ ಮೋದಿಯೇ ನಂಬರ್​-1 ಲೀಡರ್​​

ABOUT THE AUTHOR

...view details