ನವದೆಹಲಿ: ಬೈಪಾಸ್ ಸರ್ಜರಿಗೆ ಒಳಗಾಗಿದ್ದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಇಂದು ದೆಹಲಿಯ ಏಮ್ಸ್ನ ತೀವ್ರ ನಿಗಾ ಘಟಕ (ಐಸಿಯು)ದಿಂದ ವಿಶೇಷ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ದಿನದಿಂದ ದಿನಕ್ಕೆ ಕೋವಿಂದ್ ಅವರ ಆರೋಗ್ಯ ಚೇತರಿಸಿಕೊಳ್ಳುತ್ತಿದೆ. ಏಮ್ಸ್ ವೈದ್ಯರು ಅವರ ಮೇಲೆ ನಿಗಾ ಇರಿಸಿದ್ದು, ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ರಾಷ್ಟ್ರಪತಿ ಭವನ ಮಾಹಿತಿ ನೀಡಿದೆ.