ಕರ್ನಾಟಕ

karnataka

ETV Bharat / bharat

PM Modi Birthday: ರಾಷ್ಟ್ರಪತಿ ಶುಭ ಹಾರೈಕೆ.. ರಾಹುಲ್ ಸೇರಿ ಗಣ್ಯರಿಂದ ಶುಭಾಶಯ - ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭ ಹಾರೈಕೆ

72ನೇ ವಸಂತಕ್ಕೆ ಕಾಲಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದ ಬರ್ತಿದ್ದು, ಜನಮೆಚ್ಚಿರುವ ನಾಯಕನಿಗೆ ಟ್ವೀಟ್ ಮೂಲಕ ಶುಭ ಹಾರೈಕೆ ಮಾಡಲಾಗ್ತಿದೆ.

President Murmu extends birthday greetings to PM
President Murmu extends birthday greetings to PM

By

Published : Sep 17, 2022, 10:04 AM IST

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಶುಭಾಶಯ ಕೋರಿದ್ದಾರೆ. ಈ ವೇಳೆ ಪ್ರಧಾನಿ ಅವರ ಉತ್ತಮ ಹಾಗೂ ದೀರ್ಘಾಯುಷ್ಯಕ್ಕಾಗಿ ಅವರು ಹಾರೈಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ನೇತೃತ್ವದಲ್ಲಿ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಸೃಜನಶೀಲತೆಯಿಂದ ರಾಷ್ಟ್ರ ನಿರ್ಮಾಣ ಅಭಿಯಾನ ನಡೆಯಬೇಕೆಂದು ನಾನು ಬಯಸುತ್ತೇನೆ. ನಿಮ್ಮ ನಾಯಕತ್ವದಲ್ಲಿ ದೇಶ ಪ್ರಗತಿಯನ್ನು ಮುಂದುವರೆಸಿದೆ. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

ಇನ್ನುಳಿದಂತೆ ಉಪರಾಷ್ಟ್ರಪತಿ ಜಗದೀಪ್ ಧನಕರ್​, ಕೇಂದ್ರ ಸಚಿವ ಸಂಪುಟದ ಅಮಿತ್ ಶಾ, ರಾಜನಾಥ್​ ಸಿಂಗ್, ಪ್ರಹ್ಲಾದ್ ಜೋಶಿ, ವಿದೇಶಾಂಗ ಸಚಿವ ಎಸ್​​ ಜೈಶಂಕರ್​​​ ಸೇರಿದಂತೆ ಅನೇಕರು ನೆಚ್ಚಿನ ನಾಯಕನಿಗೆ ಹುಟ್ಟುಹಬ್ಬದ ಶುಭಾಯಶಯ ಕೋರಿದ್ದಾರೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಯಗಳು ಎಂದಿದ್ದಾರೆ. ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್ ಚೌಹಾಣ್​ ಕೂಡ ವಿಶ್​ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಟ್ವೀಟ್ ಮೂಲಕ ಶುಭ ಹಾರೈಕೆ ಮಾಡಿದ್ದು, ಧೀಮಂತ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ನಾಡಿನ ಜನತೆಯ ಪರವಾಗಿ ಜನ್ಮ ದಿನದ ಶುಭಾಶಯಗಳು. ಆಯುಷ್ಯ, ಆರೋಗ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಸಂಸದೀಯ ಮಂಡಳಿಯ ಸದಸ್ಯರಾಗಿರುವ ಬಿ ಎಸ್​​ ಯಡಿಯೂರಪ್ಪ ಕೂಡ ಟ್ವೀಟ್ ಮೂಲಕ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ:ಮೋದಿ ಜೀವನದಲ್ಲಿ ತಾಯಿ ಹೀರಾಬೆನ್ ಮಹತ್ವದ​ ಪಾತ್ರ.. ಸಾಮಾನ್ಯ ಕುಟುಂಬದಿಂದ ಬಂದ ಸಾಧಕನ ಕಥೆ

72ನೇ ವಸಂತಕ್ಕೆ ಕಾಲಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಭೇಟಿ ನೀಡಲಿದ್ದು, ಇದರ ಬೆನ್ನಲ್ಲೇ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ಬಳಿಕ ದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿ (ಎನ್‌ಎಲ್‌ಪಿ) ಅನ್ನು ಬಿಡುಗಡೆ ಮಾಡಲಿದ್ದಾರೆ.

ಮೋದಿ ಹುಟ್ಟುಹಬ್ಬದ ಅಂಗವಾಗಿ ದೇಶಾದ್ಯಂತ ಬಿಜೆಪಿ ವಿಭಿನ್ನ ಕಾರ್ಯಕ್ರಮ ಆಯೋಜನೆ ಮಾಡಿದೆ. ಇದರಲ್ಲಿ ಮುಖ್ಯವಾಗಿ ‘ವೈವಿಧ್ಯತೆಯಲ್ಲಿ ಏಕತೆ’ ಹಬ್ಬಗಳು, ರಕ್ತದಾನ ಅಭಿಯಾನ, ಸ್ವಚ್ಛತಾ ಅಭಿಯಾನ ಸೇರಿದ್ದು ಸೇವಾ ಪಖವಾಡ ಸಹ ಇದೆ.

ABOUT THE AUTHOR

...view details