ನವದೆಹಲಿ:ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗಿಯಾಗಿದ್ದ ಪ್ರತಿ ಅಥ್ಲೀಟ್ಸ್ಗಳ ಬಗ್ಗೆ ದೇಶವೇ ಹೆಮ್ಮೆ ಪಡುತ್ತದೆ. ಕ್ರೀಡಾ ಹಬ್ಬದಲ್ಲಿ ಭಾಗಿಯಾಗಿ ಅವರು ಭಾರತದ ಕೀರ್ತಿ ಹೆಚ್ಚಿಸಿದ್ದಾರೆಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೆಚ್ಚುಗೆ ಮಾತಗಳನ್ನಾಡಿದರು. ರಾಷ್ಟ್ರಪತಿ ಭವನದಲ್ಲಿ ಆಯೋಜನೆ ಮಾಡಲಾಗಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.
ಟೋಕಿಯೋ ಒಲಿಂಪಿಕ್ಸ್ ಅಥ್ಲೀಟ್ಸ್ಗಳೊಂದಿಗೆ ಚಹಾ ಕೂಟದಲ್ಲಿ ಭಾಗಿಯಾಗಿ ಮಾತನಾಡಿರುವ ರಾಮನಾಥ್ ಕೋವಿಂದ್, ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗಿಯಾಗಿದ್ದ ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಇದರಿಂದ ಇಡೀ ದೇಶವೇ ಹೆಮ್ಮೆ ಪಡುತ್ತದೆ. ಒಲಿಂಪಿಕ್ಸ್ ಇತಿಹಾಸದಲ್ಲೇ ಈ ತಂಡ ಅತಿ ಹೆಚ್ಚು ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಇದು ನಮ್ಮ ದೇಶದ ಹೆಮ್ಮೆ ಎಂದು ತಿಳಿಸಿದರು.
ಅಥ್ಲೀಟ್ಸ್ಗಳ ಈ ಸಾಧನೆ ಯುವ ಪೀಳಿಗೆಗೆ ಸ್ಪೂರ್ತಿಯಾಗಿದ್ದು, ಬರುವ ದಿನಗಳಲ್ಲಿ ಅನೇಕರು ಕ್ರೀಡಾಪಟುಗಳಾಗಿ ಹೊರಹೊಮ್ಮಲು ದಾರಿದೀಪವಾಗಲಿದೆ ಎಂದರು.