ಕರ್ನಾಟಕ

karnataka

ETV Bharat / bharat

'ವಿಶ್ವದ ಅತಿ ದೊಡ್ಡ ​ಕ್ರೀಡಾಂಗಣ'ವನ್ನು ಉದ್ಘಾಟಿಸಲಿರುವ ರಾಷ್ಟ್ರಪತಿ ರಾಮನಾಥ್​ ಕೋವಿಂದ್​

ಅಹಮದಾಬಾದ್‌ನ ಸರ್ದಾರ್ ಪಟೇಲ್ ಮೊಟೆರಾ ಕ್ರೀಡಾಂಗಣವು 63 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿದ್ದು, 1.10 ಲಕ್ಷ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದೆ. ಈ ಕ್ರೀಡಾಂಗಣವನ್ನು ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಉದ್ಘಾಟನೆ ಮಾಡಲಿದ್ದಾರೆ.

Motera Stadium
ರಾಷ್ಟ್ರಪತಿ ರಾಮನಾಥ್​ ಕೋವಿಂದ್​

By

Published : Feb 23, 2021, 1:29 PM IST

ನವದೆಹಲಿ: ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್‌ನ ಸಬರಮತಿಯಲ್ಲಿರುವ ಮೊಟೆರಾ ಕ್ರೀಡಾಂಗಣವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಉದ್ಘಾಟಿಸಲಿದ್ದು, ಬುಧವಾರದಿಂದ ಆರಂಭವಾಗಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಮೈದಾನ ಸಿದ್ಧವಾಗುತ್ತಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿಶೇಷ ಉಪಸ್ಥಿತಿಯಲ್ಲಿ ಗುರುವಾರ ಕ್ರೀಡಾಂಗಣವನ್ನು ರಾಷ್ಟ್ರಪತಿಗಳು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆ ಗುಜರಾತ್ ಸೇರಿದಂತೆ ಇಡೀ ದೇಶದಲ್ಲಿ ಹಬ್ಬದ ವಾತಾವರಣ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಹಮದಾಬಾದ್‌ನ ಸರ್ದಾರ್ ಪಟೇಲ್ ಮೊಟೆರಾ ಕ್ರೀಡಾಂಗಣವು 63 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿದ್ದು, 1.10 ಲಕ್ಷ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಹೊಂದಿದೆ. ಪ್ರಸ್ತುತ , ಆಸ್ಟ್ರೇಲಿಯಾದ ಮೆಲ್ಬೋರ್ನ್ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಇದು ಏಕಕಾಲದಲ್ಲಿ 90,000 ಜನರು ಕುಳಿತುಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಆದರೆ, ಈಗ ಮೊಟೆರಾ ವಿಶ್ವದ ಅತಿದೊಡ್ಡ ಕ್ರೀಡಾಂಗಣವನ್ನು ನಿರ್ಮಿಸಿದ ಹೊಸ ದಾಖಲೆ ಬರೆಯಲಿದೆ.

800 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾದ ಈ ಕ್ರೀಡಾಂಗಣ ನೋಡಲು ಅದ್ಭುತವಾಗಿದೆ. ಈ ಕ್ರೀಡಾಂಗಣವನ್ನು ಲಾರ್ಸೆನ್ & ಟರ್ಬೊ (ಎಲ್ & ಟಿ) ಕಂಪನಿಯು ನಿರ್ಮಿಸಿದೆ. ಈ ಕ್ರೀಡಾಂಗಣ ಒಲಿಂಪಿಕ್ ರೀತಿಯ ಈಜುಕೊಳ, ಕ್ರೀಡಾಪಟುಗಳಿಗೆ ನಾಲ್ಕು ಡ್ರೆಸ್ಸಿಂಗ್ ರೂಮ್​ಗಳು, ಫುಡ್ ಕೋರ್ಟ್‌ಗಳು ಮತ್ತು ಜಿಸಿಎ ಕ್ಲಬ್ ಹೌಸ್ ಸೇರಿದಂತೆ ಅತ್ಯಾಧುನಿಕ ಸೌಲಭಗಳನ್ನು ಒಳಗೊಂಡಿದೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್​ ಸ್ಫೋಟ ಪ್ರಕರಣ: ಓರ್ವ ಆರೋಪಿ ಅರೆಸ್ಟ್​

ABOUT THE AUTHOR

...view details