ನವದೆಹಲಿ: ಈ ಮೊದಲು ಬೈಪಾಸ್ ಸರ್ಜರಿಗೊಳಗಾಗಿದ್ದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ (75) ಅವರು ಇದೀಗ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
"ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು (ಗುರುವಾರ) ಬೆಳಗ್ಗೆ ನವದೆಹಲಿಯ ಆರ್ಆರ್ ಸೇನಾ ಆಸ್ಪತ್ರೆಯಲ್ಲಿ (ರೆಫರಲ್ ಮತ್ತು ಸಂಶೋಧನಾ ಆಸ್ಪತ್ರೆ) ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದರು. ಸರ್ಜರಿ ಯಶಸ್ವಿಯಾಗಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ" ಎಂದು ರಾಷ್ಟ್ರಪತಿ ಭವನ ಹೇಳಿಕೆ ನೀಡಿದೆ.