ನವದೆಹಲಿ:ದೇಶದರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಅವರ ಧರ್ಮಪತ್ನಿ ಸುನೀತಾ ಕೋವಿಂದ್ ಸ್ವಗ್ರಾಮಕ್ಕೆ ತೆರಳಲು ರೈಲು ಪ್ರಯಾಣ ಮಾಡಿದರು. ಉತ್ತರ ಪ್ರದೇಶದ ಕಾನ್ಪುರದಲ್ಲಿರುವ ಸ್ವಗ್ರಾಮಕ್ಕೆ ತೆರಳಲು ದೆಹಲಿಯ ಸಫ್ದಾರ್ಜಂಗ್ ರೈಲ್ವೆ ನಿಲ್ದಾಣದಿಂದ ವಿಶೇಷ ರೈಲಿನಲ್ಲಿ ಪ್ರಯಾಣ ಬೆಳೆಸಿದರು.
ಕಳೆದ 15 ವರ್ಷಗಳಲ್ಲಿ ರೈಲು ಪ್ರಯಾಣ ಮಾಡಿರುವ ಮೊದಲ ರಾಷ್ಟ್ರಪತಿಯಾಗಿದ್ದಾರೆ. ಈ ಹಿಂದೆ 2006ರಲ್ಲಿ ಆಗಿನ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ಲ ಕಲಾಂ ದೆಹಲಿಯಿಂದ ಡೆಹ್ರಾಡೂನ್ಗೆ ರೈಲಿನಲ್ಲೇ ಪ್ರಯಾಣ ಬೆಳೆಸಿದ್ದರು. ಈ ಮೂಲಕ ಎಲ್ಲರಿಗೂ ಮಾದರಿಯಾದರು. ರಾಷ್ಟ್ರಪತಿ ಜೂ.27ರಂದು ತಮ್ಮ ಸ್ವಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.