ರಾಯಪುರ(ಛತ್ತೀಸ್ಗಢ):ರಾಷ್ಟ್ರಪತಿ ಚುನಾವಣೆಯ ಹಿನ್ನೆಲೆ ಮತಯಾಚನೆ ನಡೆಸುತ್ತಿರುವ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾದ ಯಶವಂತ್ ಸಿನ್ಹಾ ಛತ್ತೀಸ್ಗಢಕ್ಕೆ ಭೇಟಿ ನೀಡಿ ಅಲ್ಲಿನ ಶಾಸಕರೊಂದಿಗೆ ಸಭೆ ನಡೆಸಿ ಬೆಂಬಲ ಕೋರಿದರು.
ಈ ವೇಳೆ ಮಾತನಾಡಿದ ಅವರು, ರಾಷ್ಟ್ರಪತಿ ಹುದ್ದೆ ಅತ್ಯಂತ ಘನತೆಯುಳ್ಳದ್ದು, ಆ ಸ್ಥಾನಕ್ಕೆ ಚುನಾವಣೆ ನಡೆಸದೇ ಅವಿರೋಧವಾಗಿ ಆಯ್ಕೆ ಮಾಡುವುದು ಉತ್ತಮ ಎಂದು ಅಭಿಪ್ರಾಯಪಟ್ಟರು. ಈ ದೇಶಕ್ಕೆ ಮೂಕ(ಮಾತನಾಡದೇ ಇರುವ) ರಾಷ್ಟ್ರಪತಿಗಳು ಬೇಕಿಲ್ಲ. ಅಧ್ಯಕ್ಷರು ಸರ್ಕಾರದ ಕೈಗೊಂಬೆಯಾಗಬಾರದು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿ ಎಂದರು.