ಕೋಲ್ಕತಾ: ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗಾಗಿ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಚೂಣಿಯ ನಾಯಕಿಯಾಗಿ ಶ್ರಮಿಸುತ್ತಿದ್ದಾರೆ. ರಾಷ್ಟ್ರಪತಿ ಅಭ್ಯರ್ಥಿಯಾಗಿ ಹಲವಾರು ಹೆಸರುಗಳನ್ನು ಮಮತಾ ಬ್ಯಾನರ್ಜಿ ಅವರಿಗೆ ಅನೇಕ ಪಕ್ಷಗಳು ಶಿಫಾರಸು ಮಾಡಿವೆ.
ರಾಷ್ಟ್ರಪತಿ ಚುನಾವಣೆ: ಯಶವಂತ್ ಸಿನ್ಹಾ ಅಭ್ಯರ್ಥಿಯಾಗಿಸಲು ಟಿಎಂಸಿಗೆ ಶಿಫಾರಸು - ತೃಣಮೂಲ ಕಾಂಗ್ರೆಸ್ ಯಶವಂತ್ ಸಿನ್ಹಾ
ಒಂದು ಕಾಲಕ್ಕೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿದ್ದು, ಈಗ ಪಕ್ಷ ತೊರೆದು ತೃಣಮೂಲ ಕಾಂಗ್ರೆಸ್ ಸೇರಿರುವ ಯಶವಂತ್ ಸಿನ್ಹಾ ಅವರ ಹೆಸರನ್ನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯನ್ನಾಗಿಸುವಂತೆ ರಾಜಕೀಯ ಪಕ್ಷವೊಂದು ಮಮತಾ ಬ್ಯಾನರ್ಜಿಗೆ ಶಿಫಾರಸು ಮಾಡಿದೆ ಎನ್ನಲಾಗಿದೆ.
ಆದರೆ ಹೊಸ ಬೆಳವಣಿಗೆಯೊಂದರಲ್ಲಿ ಒಂದು ಕಾಲದಲ್ಲಿ ಬಿಜೆಪಿ ಸರ್ಕಾರದಲ್ಲಿ ಕೇಂದ್ರ ಮಂತ್ರಿಯಾಗಿದ್ದು, ಈ ಪಕ್ಷ ತೊರೆದಿರುವ ಮುಖಂಡರೊಬ್ಬರ ಹೆಸರನ್ನು ಮಮತಾ ಬ್ಯಾನರ್ಜಿಗೆ ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ.
ಒಂದು ಕಾಲಕ್ಕೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿದ್ದು, ಈಗ ಪಕ್ಷ ತೊರೆದು ತೃಣಮೂಲ ಕಾಂಗ್ರೆಸ್ ಸೇರಿರುವ ಯಶವಂತ್ ಸಿನ್ಹಾ ಅವರ ಹೆಸರನ್ನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯನ್ನಾಗಿಸುವಂತೆ ರಾಜಕೀಯ ಪಕ್ಷವೊಂದು ಮಮತಾ ಬ್ಯಾನರ್ಜಿಗೆ ಶಿಫಾರಸು ಮಾಡಿದೆ ಎನ್ನಲಾಗಿದೆ. ಆದರೆ, ಈವರೆಗೂ ಟಿಎಂಸಿ ಈ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಎಲ್ಲ ಪ್ರತಿಪಕ್ಷಗಳು ಒಮ್ಮತ ಸೂಚಿಸಿದಲ್ಲಿ ಮುಂದಿನ ಬೆಳವಣಿಗೆಯಾಗಬಹುದು.