ನವದೆಹಲಿ:ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24ರಂದು ಅಂತ್ಯಗೊಳ್ಳಲಿದ್ದು, ಹೀಗಾಗಿ ನೂತನ ರಾಷ್ಟ್ರಪತಿಗಳ ನೇಮಕ ಮಾಡಲು ಕೇಂದ್ರ ಚುನಾವಣಾ ಆಯೋಗದಿಂದ ಇಂದು ಮಧ್ಯಾಹ್ನ ಮೂರು ಗಂಟೆಗೆ ವೇಳಾಪಟ್ಟಿ ಪ್ರಕಟವಾಗಲಿದೆ. ಇದಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದು, ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ದಟ್ಟವಾಗಿದೆ.
ಸಂವಿಧಾನದ 62ನೇ ವಿಧಿ ಪ್ರಕಾರ ಮುಂದಿನ ರಾಷ್ಟ್ರಪತಿ ಜುಲೈ 25ರೊಳಗೆ ಪ್ರಮಾಣ ವಚನ ಸ್ವೀಕಾರ ಮಾಡಬೇಕಾಗಿದ್ದು, ಇಂದು ವೇಳಾಪಟ್ಟಿ ಪ್ರಕಟಗೊಳ್ಳಲಿದೆ. ರಾಷ್ಟ್ರಪತಿಗಳ ಆಯ್ಕೆಯಲ್ಲಿ ದೇಶದ 776 ಸಂಸದರು ಹಾಗೂ 4,120 ಶಾಸಕರು ವೋಟ್ ಮಾಡಲಿದ್ದಾರೆ. ಈ ಹಿಂದೆ 2017ರಲ್ಲಿ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ರಾಮನಾಥ್ ಕೋವಿಂದ್ ಅವರು ಶೇ. 65.35ರಷ್ಟು ವೋಟ್ಗಳಿಸಿ, ಭಾರತದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು.