ಕರ್ನಾಟಕ

karnataka

ETV Bharat / bharat

ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ರಣತಂತ್ರ : ಅಭ್ಯರ್ಥಿ ಪರ ಪ್ರಚಾರ ನಿರ್ವಹಣೆಗೆ 14 ಸದಸ್ಯರ ಸಮಿತಿ ರಚನೆ - BJP on Friday formed a 14 member management committee for next months Presidential poll

ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಇಂದು 14 ಸದಸ್ಯರ ನಿರ್ವಹಣಾ ಸಮಿತಿಯನ್ನು ರಚಿಸಿದೆ. ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಚಾಲಕರನ್ನಾಗಿ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ತಾವ್ಡೆ ಮತ್ತು ಸಿ ಟಿ ರವಿ ಅವರು ಸಮಿತಿಯ ಸಹ ಸಂಚಾಲಕರಾಗಿದ್ದಾರೆ..

ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ರಣತಂತ್ರ
ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ರಣತಂತ್ರ

By

Published : Jun 17, 2022, 5:08 PM IST

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಇಂದು 14 ಸದಸ್ಯರ ನಿರ್ವಹಣಾ ಸಮಿತಿಯನ್ನು ರಚಿಸಿದೆ. ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಚಾಲಕರನ್ನಾಗಿ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ತಾವ್ಡೆ ಮತ್ತು ಸಿ ಟಿ ರವಿ ಅವರು ಸಮಿತಿಯ ಸಹ ಸಂಚಾಲಕರಾಗಿದ್ದಾರೆ.

ಕೇಂದ್ರ ಸಚಿವರಾದ ಜಿ ಕಿಶನ್ ರೆಡ್ಡಿ, ಅಶ್ವಿನಿ ವೈಷ್ಣವ್, ಸರ್ಬಾನಂದ ಸೋನೋವಾಲ್, ಅರ್ಜುನ್ ಮೇಘವಾಲ್ ಮತ್ತು ಭಾರತಿ ಪವಾರ್ ಸಮಿತಿಯ ಸದಸ್ಯರಾಗಿದ್ದಾರೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಉಪಾಧ್ಯಕ್ಷ ಡಿ ಕೆ ಅರುಣಾ, ರಾಷ್ಟ್ರೀಯ ಕಾರ್ಯದರ್ಶಿ ರಿತುರಾಜ್ ಸಿನ್ಹಾ, ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷೆ ವನತಿ ಶ್ರೀನಿವಾಸನ್, ವಕ್ತಾರ ಸಂಬಿತ್ ಪಾತ್ರ ಮತ್ತು ಸಂಸದ ಮತ್ತು ಪಕ್ಷದ ಅಸ್ಸೋಂ ಘಟಕದ ಉಪಾಧ್ಯಕ್ಷ ರಾಜದೀಪ್ ರಾಯ್ ಕೂಡ ಈ ಸಮಿತಿಯಲ್ಲಿದ್ದಾರೆ.

ಎನ್‌ಡಿಎ ಅಭ್ಯರ್ಥಿ ಪರ ರಾಷ್ಟ್ರವ್ಯಾಪಿ ಪ್ರಚಾರ ಕಾರ್ಯವನ್ನು ಸಮಿತಿ ನಿರ್ವಹಿಸಲಿದೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದೆ. ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದೆ.

ಇದನ್ನೂ ಓದಿ : ನವಾಬ್ ಮಲ್ಲಿಕ್, ಅನಿಲ್ ದೇಶಮುಖ್​ಗೆ ಮತಚಲಾವಣೆಗೆ ಅವಕಾಶ ನಿರಾಕರಿಸಿದ ಹೈಕೋರ್ಟ್​

ABOUT THE AUTHOR

...view details