ನವದೆಹಲಿ:ಸೆಪ್ಟೆಂಬರ್ ತಿಂಗಳ ಮೊದಲ ದಿನವೇ ಗ್ರಾಹಕರಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಎಲ್ಪಿಜಿ ಗ್ಯಾಸ್ ಬೆಲೆಯಲ್ಲಿ ತುಸು ಇಳಿಕೆ ಕಂಡು ಬಂದಿದೆ. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 91.50 ಪೈಸೆ ಇಳಿಕೆ ಮಾಡಿವೆ. ಇಂದಿನಿಂದ ನೂತನ ದರ ಜಾರಿಗೆ ಬರಲಿದೆ.
19 ಕೆಜಿ ವಾಣಿಜ್ಯ ಇಂಧನ ಗ್ಯಾಸ್ ಬೆಲೆ ಇದೀಗ 1,976 ರೂಪಾಯಿ ಬದಲಿಗೆ 1,885 ಆಗಿರುತ್ತದೆ. ತೈಲ ಕಂಪನಿಗಳು ಪ್ರತಿ ತಿಂಗಳ 1ನೇ ತಾರೀಖಿನಂದು ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಿಸುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಇಂಧನ ಬೆಲೆ ಗಮನದಟ್ಟುಕೊಂಡು ಬೆಲೆ ಪರಿಷ್ಕರಣೆ ಮಾಡಲಾಗ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ ಕಂಡು ಬಂದಿರುವ ಕಾರಣ ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಿವೆ.ಇಂಡಿಯನ್ ಆಯಿಲ್ ಬಿಡುಗಡೆ ಮಾಡಿರುವ ಬೆಲೆಗಳ ಪ್ರಕಾರ 19 ಕೆಜಿ ವಾಣಿಜ್ಯ ಸಿಲಿಂಡರ್ ದರದಲ್ಲಿ 91.5 ರೂಪಾಯಿ ಕಡಿಮೆ ಆಗಿದೆ.