ಗ್ವಾಲಿಯರ್(ಮಧ್ಯಪ್ರದೇಶ):ಸರ್ಕಾರಿ ಶಾಲೆಯ ಶಿಕ್ಷಕರು ಬಡವರು ಎಂಬ ಮಾತಿದೆ. ಆದರೆ, ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿರುವ ಈ ಶಿಕ್ಷಕ ಮಾತ್ರ ಇದಕ್ಕೆ ತದ್ವಿರುದ್ಧ. ಸರ್ಕಾರಿ ಶಾಲೆಯ ಶಿಕ್ಷಕನಾದರೂ ಈತನೇ 20 ಕಾಲೇಜುಗಳ ಒಡೆಯನಾಗಿದ್ದಾನೆ. ಅಲ್ಲದೇ, ಆದಾಯಕ್ಕಿಂತ ಸಾವಿರ ಪಟ್ಟು ಹೆಚ್ಚು ಆಸ್ತಿ ಹೊಂದಿದ್ದಾನೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದಾಗ ಈ ವಿಷಯ ಬಹಿರಂಗವಾಗಿದೆ. ಅಲ್ಲದೇ ಶಿಕ್ಷಕನ ಆಸ್ತಿಯನ್ನು ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ.
ಗ್ವಾಲಿಯರ್ ನಿವಾಸಿಯಾದ ಈ ಶಿಕ್ಷಕನ ಹೆಸರು ಪ್ರಶಾಂತ್ ಪರ್ಮಾರ್. ಘಾಟಿಗಾಂವ್ ಎಂಬಲ್ಲಿನ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿರುವ ಇವರ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪ ಕೇಳಿಬಂದ ಹಿನ್ನೆಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಿದಾಗ ಶಿಕ್ಷಕನ ಸಂಪಾದನೆಗಿಂತ 1 ಸಾವಿರ ಪಟ್ಟು ಹೆಚ್ಚು ಆಸ್ತಿ ಕಂಡು ಬಂದಿದೆ.