ಕೋಲ್ಕತ್ತಾ(ಪಶ್ಚಿಮ ಬಂಗಾಳ):ಕೋಲ್ಕತ್ತಾದಲ್ಲಿನ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ್ದಾರೆ. ಈ ವೇಳೆ ಸಿಎಂ ಮಮತಾ ಬ್ಯಾನರ್ಜಿ ಉಪಸ್ಥಿತರಿದ್ದರು.
ಸುಮಾರು 530 ಕೋಟಿ ರೂ. ವೆಚ್ಚದಲ್ಲಿ ಸಿಎನ್ಸಿಐ ಕ್ಯಾಂಪನ್ ನಿರ್ಮಿಸಲಾಗಿದ್ದು, ಕೇಂದ್ರ ಸರ್ಕಾರದಿಂದ 400 ಕೋಟಿ ರೂ. ಅನುದಾನ ಸಿಕ್ಕಿದೆ. 460 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಲ್ಲಿ ನ್ಯೂಕ್ಲಿಯರ್ ಮೆಡಿಸಿನ್, ಟೆಸ್ಲಾ ಎಂಆರ್ಐ, ಸಿಟಿ ಸ್ಕ್ಯಾನರ್ ಸೇರಿದಂತೆ ಎಲ್ಲ ರೀತಿಯ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ.
ಕ್ಯಾನ್ಸರ್ ಆಸ್ಪತ್ರೆ ಕ್ಯಾಂಪನ್ ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರ ಇಲ್ಲಿಯವರೆಗೆ 11 ಕೋಟಿ ಕೋವಿಡ್ ವ್ಯಾಕ್ಸಿನ್ ನೀಡಿದೆ. ಜೊತೆಗೆ, 1,500 ವೆಂಟಿಲೇಟರ್ಸ್, 9 ಸಾವಿರ ಆಕ್ಸಿಜನ್ ಸಿಲಿಂಡರ್, 49 ಪಿಎಸ್ಎ ಆಕ್ಸಿಜನ್ ಪ್ಲಾಟ್ ನೀಡಲಾಗಿದ್ದು, ಕೋವಿಡ್ ವಿರುದ್ಧ ಹೋರಾಡಲು ಎಲ್ಲ ರೀತಿಯ ಸಹಕಾರ ನೀಡಲಾಗಿದೆ ಎಂದರು.