ಚಂಡೀಗಢ (ಪಂಜಾಬ್) : ಕಳೆದ ವರ್ಷ ಜನವರಿ 5 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ‘ಭದ್ರತಾ ಲೋಪ’ಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಶೀಘ್ರವೇ ಮಹತ್ವದ ಕ್ರಮಗಳನ್ನು ತೆಗದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ. ಮಾಹಿತಿ ಪ್ರಕಾರ, ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ವರದಿಯನ್ನು ಸಿದ್ಧಪಡಿಸಿದ್ದು, ವರದಿಯಲ್ಲಿ ಡಿಜಿಪಿ ಮತ್ತು 9 ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಿದ್ದತೆ ನಡೆದಿದೆ ಎಂದು ತಿಳಿದು ಬಂದಿದೆ. ಕೇಂದ್ರದ ವರದಿ ಆಧಾರದ ಮೇಲೆ ಪಂಜಾಬ್ ಸರ್ಕಾರಕ್ಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.
ಕಳೆದ ವರ್ಷ ಪಂಜಾಬ್ ಚುನಾವಣೆ ವೇಳೆ, ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯಲ್ಲಿ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಭವಾಗಿದ್ದಕ್ಕೆ ಪಂಜಾಬ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವಾಲಯವು ಮುನಿಸಿಕೊಂಡಿತ್ತು. ಇದಾದ ಬಳಿಕ ಪಂಜಾಬ್ ಸರ್ಕಾರದ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಅವರು ಪ್ರತಿಕ್ರಿಯೆ ನೀಡಿದ್ದು, ‘‘ನರೇಂದ್ರ ಮೋದಿ ಅವರು ನಮ್ಮೆಲ್ಲರ ಪ್ರಧಾನಿ, ಅವರ ಭದ್ರತೆಯನ್ನು ನಿರ್ಲಕ್ಷಿಸಿದ ರೀತಿ ನೋಡಿದರೆ ಸರ್ಕಾರ ಅವರ ವಿರುದ್ಧವಾಗಿದೆ. ತಪ್ಪಿತಸ್ಥರು ಯಾರೇ ಯಾರೇ ಆಗಿದ್ದರು ಅವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಮೂಲನೆ ಕುರಿತು ಪಂಜಾಬ್ನ ಕಾಂಗ್ರೆಸ್ ಮುಖಂಡ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುಖ್ಜೀಂದರ್ ರಾಂಧವಾ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ‘‘ಒಬ್ಬ ನಾಯಕ ಈ ರೀತಿಯಾದಂತಹ ಹೇಳಿಕೆಯನ್ನು ನೀಡಬಾರದು. ಏನನ್ನಾದರೂ ಹೇಳುವ ಮೊದಲು ಯೋಚಿಸಿ ಮಾತನಾಡಬೇಕು’’ ಎಂದು ಪಂಜಾಬ್ ಸರ್ಕಾರದ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಹೇಳಿದ್ದಾರೆ.