ಕರ್ನಾಟಕ

karnataka

By

Published : Feb 28, 2022, 11:34 AM IST

Updated : Feb 28, 2022, 2:19 PM IST

ETV Bharat / bharat

ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ; ರಿಜಿಜು ಸೇರಿ ನಾಲ್ವರು ಸಚಿವರಿಗೆ ವಾರ್‌ ಡ್ಯೂಟಿ..

ದೆಹಲಿಯ ತಮ್ಮ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ನಾಲ್ವರು ಕೇಂದ್ರ ಸಚಿವರನ್ನು ಉಕ್ರೇನ್‌ನ ನೆರೆಯ ದೇಶಗಳಿಗೆ ಕಳುಹಿಸಿ ಅಲ್ಲಿನ ಸರ್ಕಾರಗಳ ಸಹಕಾರದೊಂದಿಗೆ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಿಕೆ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ..

Prime Minister Narendra Modi calls a high-level meeting on the Ukraine crisis
ದೆಹಲಿಯಲ್ಲಿ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ; ಉಕ್ರೇನ್‌ನಲ್ಲಿ ಸಿಲಿರುವ ಭಾರತೀಯ ಕರೆತರಲು ಅಗತ್ಯ ಕ್ರಮದ ಚರ್ಚೆ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿಂದು ಸಚಿವರು, ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆದಿದೆ. ಉಕ್ರೇನ್‌ ಬಿಕ್ಕಟ್ಟಿನ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತಮ್ಮ ಸಚಿವ ಸಂಪುಟದ ನಾಲ್ವರು ಸಚಿವರಿಗೆ ವಾರ್‌ ಡ್ಯೂಟಿ ನೀಡಿದ್ದಾರೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ; ಉಕ್ರೇನ್‌ನಿಂದ ಭಾರತೀಯರನ್ನ ಕರೆತರಲು ಅಗತ್ಯ ಕ್ರಮದ ಚರ್ಚೆ

ಉಕ್ರೇನ್‌ನಲ್ಲಿ ಸಂಕಷ್ಟ ಅನುಭವಿಸುತ್ತಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲು ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಹಾಗೂ ಜನರಲ್ ವಿಕೆ ಸಿಂಗ್ ಅವರನ್ನು ಉಕ್ರೇನ್‌ನ ನೆರೆಯ ರಾಷ್ಟ್ರಗಳಿಗೆ ಕಳುಹಿಸಲು ನಿರ್ಧರಿಸಲಾಗಿದೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ; ರಿಜಿಜು ಸೇರಿ ಮೂವರು ಸಚಿವರಿಗೆ ವಾರ್‌ ಡ್ಯೂಟಿ..

ವಿದೇಶಾಂಗ ಸಚಿವ ಎಸ್ ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಎನ್ಎಸ್ಎ ಅಜಿತ್ ದೋವಲ್ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದರು.

Last Updated : Feb 28, 2022, 2:19 PM IST

ABOUT THE AUTHOR

...view details