ನವದೆಹಲಿ: ದೇಶಾದ್ಯಂತ ಸಂಭ್ರದಿಂದ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ. ಈ ಸುಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ.
75ನೇ ಸ್ವಾತಂತ್ರ್ಯ ದಿನಾಚರಣೆ.. ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ ಮೋದಿ - Indian Independence day celebration
ದೇಶಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಇಂದು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನ ಕೋರಿದ್ದಾರೆ.
ಪ್ರಧಾನಿ ಮೋದಿ
ಸಾಮಾಜಿಕ ಜಾಲತಾಣ ಟ್ವಿಟರ್ನಲ್ಲಿ ಟ್ವೀಟ್ ಮಾಡಿರುವ ಅವರು, ಎಲ್ಲ ದೇಶವಾಸಿಗಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಎಂದು ಹೇಳಿದ್ದಾರೆ. ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ಪ್ರಧಾನಮಂತ್ರಿ ಮೋದಿಯವರು ದೆಹಲಿಯ ಕೆಂಪುಕೋಟೆಯಲ್ಲಿ ಇಂದು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಕಾಂಗ್ರೆಸ್ನಿಂದ 3.50 ಕಿಮೀ ಉದ್ದದ ರಾಷ್ಟ್ರಧ್ವಜ ಮೆರವಣಿಗೆ