ಕರ್ನಾಟಕ

karnataka

ಸಿಐಎಸ್ಎಫ್ ಸಿಬ್ಬಂದಿಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

By

Published : Mar 10, 2021, 9:24 AM IST

ಇಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಉದಯ ದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಿಐಎಸ್ಎಫ್ ಸಿಬ್ಬಂದಿಗೆ ಟ್ವೀಟ್​ ಮೂಲಕ ಶುಭ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ
Prime Minister Narendra Modi

ನವದೆಹಲಿ:ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಉದಯ ದಿನದಂದು ಸಿಐಎಸ್ಎಫ್ ಸಿಬ್ಬಂದಿಗೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

ಈ ಕುರಿತಂತೆ ಟ್ವೀಟ್​ ಮಾಡಿರುವ ಮೋದಿ, ರೈಸಿಂಗ್ ದಿನದಂದು ಧೈರ್ಯಶಾಲಿ ಸಿಐಎಸ್ಎಫ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳು. ರಾಷ್ಟ್ರೀಯ ಸುರಕ್ಷತೆ ಮತ್ತು ಪ್ರಗತಿಯನ್ನು ಹೆಚ್ಚಿಸುವಲ್ಲಿ ಅವರ ಪಾತ್ರ ಮೌಲ್ಯಯುತವಾಗಿದೆ. 2019 ರಲ್ಲಿ ನಾನು ಸಿಐಎಸ್ಎಫ್​​ನ ರೈಸಿಂಗ್ ಡೇ ಆಚರಣೆಯಲ್ಲಿ ಭಾಗವಹಿಸಿದ್ದೆ ಎಂದು ಪ್ರಧಾನಿ ಬರೆದುಕೊಂಡಿದ್ದಾರೆ.

ABOUT THE AUTHOR

...view details