ನವದೆಹಲಿ:ಇಂದಿನಿಂದ ಆರಂಭವಾಗುವ ಮುಂಗಾರು ಅಧಿವೇಶನ ಫಲಪ್ರದವಾಗಬೇಕು. ಸಂಸತ್ತಿನಲ್ಲಿ ಮುಕ್ತ ಮನಸ್ಸಿನಿಂದ ಚರ್ಚೆ, ಸಂವಾದ ನಡೆಯಬೇಕು. ಎಲ್ಲಾ ಸಂಸದರು ದೀರ್ಘವಾಗಿ ಆಲೋಚಿಸಿ ವಿಷಯಗಳ ಬಗ್ಗೆ ಚರ್ಚಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದರು.
ಅಧಿವೇಶನ ಆರಂಭಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಈ ಅಧಿವೇಶನವು ಬಹಳ ಮಹತ್ವದ್ದಾಗಿದೆ. ಏಕೆಂದರೆ ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿ ಚುನಾವಣೆಗಳು ನಡೆಯುತ್ತಿವೆ. ಇಂದು ರಾಷ್ಟ್ರಪತಿ ಚುನಾವಣೆಗೆ ಮತದಾನ ಆರಂಭವಾಗಿದೆ. ಈ ಅಧಿವೇಶನದಲ್ಲಿ ಹೊಸ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿಗಳು ಹೊಸ ಮಾರ್ಗದರ್ಶಕರಾಗಿ ಬರಲಿದ್ದಾರೆ" ಎಂದರು.