ನವದೆಹಲಿ: ಪ್ರಧಾನಿ ಮೋದಿ ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮೂಲಕ ತಿಳಿಸಿದೆ.
ಇಂದು ಸಂಜೆ 5 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ - Prime Minister Narendra Modi to address the nation today
ಇಂದು ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
![ಇಂದು ಸಂಜೆ 5 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ Modi to address the nation](https://etvbharatimages.akamaized.net/etvbharat/prod-images/768-512-12046041-thumbnail-3x2-modi.jpg)
ಇಂದು ಸಂಜೆ 5 ಗಂಟೆಗೆ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ಕಳೆದ ವರ್ಷದಿಂದ ಕೋವಿಡ್-19 ಸಾಂಕ್ರಾಮಿಕ ರೋಗ ಹರಡಿದ ಬಳಿಕ ದೇಶದ ಜನತೆಯನ್ನು ಉದ್ದೇಶಿಸಿ ಅನೇಕ ಬಾರಿ ಮಾತನಾಡಿರುವ ಪಿಎಂ ಮೋದಿ, ಅಲ್ಲದೇ ಸಂದರ್ಭಕ್ಕೆ ತಕ್ಕಂತೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುತ್ತಲೇ ಬಂದಿದ್ದಾರೆ.
ಇಂದು ಸಂಜೆಯ ಭಾಷಣದಲ್ಲಿ ಯಾವ ವಿಷಯದ ಕುರಿತು ಪ್ರಧಾನಿ ಮೋದಿ ಪ್ರಸ್ತಾಪ ಮಾಡಲಿದ್ದಾರೆ ಎಂಬುದರ ಬಗ್ಗೆ ಪಿಎಂಒ ಸುಳಿವು ನೀಡಿಲ್ಲ. ಆದರೆ ಕೊರೊನಾ ಕುರಿತಾಗಿಯೇ ಪ್ರಧಾನಿ ಮಾತನಾಡುವ ಸಾಧ್ಯತೆಗಳು ದಟ್ಟವಾಗಿವೆ.