ಲಖಿಂಪುರ ಖೇರಿ(ಉತ್ತರ ಪ್ರದೇಶ):ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ದುಬೈ, ಲಂಡನ್ನಲ್ಲೂ ಅಯೋಧ್ಯೆ ಮಾದರಿ ಭವ್ಯ ದೇವಾಲಯ ನಿರ್ಮಿಸಲು ಬಯಸಿದ್ದಾರೆ ಎಂದು ಹೇಳಿದ್ದಾರೆ.
ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮನ ಮಂದಿರ ನಿರ್ಮಾಣ ಮಾಡುವ ಮೂಲಕ ನಮೋ ಈಗಾಗಲೇ ಇತಿಹಾಸ ರಚನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಲಂಡನ್, ದುಬೈನಲ್ಲೂ ಅವರು ಭವ್ಯ ದೇವಾಲಯ ನಿರ್ಮಾಣ ಮಾಡುವ ಬಯಕೆ ಇಟ್ಟುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಮೋದಿ ಸರ್ಕಾರದ ವಿರುದ್ಧ ಇಲ್ಲಿಯವರೆಗೆ ಯಾವುದೇ ಭ್ರಷ್ಟಾಚಾರದ ಆರೋಪ ಕೇಳಿ ಬಂದಿಲ್ಲ ಎಂದಿರುವ ಸ್ವತಂತ್ರ ಸಿಂಗ್, ಪ್ರಧಾನಮಂತ್ರಿ ಇಲ್ಲಿಯವರೆಗೆ ತಮ್ಮದೇ ಆದ ಸ್ವತಃ ಮನೆ ಹೊಂದಿಲ್ಲ. ಆದರೆ 2022ರ ವೇಳೆಗೆ ಎಲ್ಲರಿಗೂ ಸೂರು ಒದಗಿಸುವ ಗುರಿ ಹೊಂದಿದ್ದಾರೆ ಎಂದು ಹೇಳಿದರು.