ಕರ್ನಾಟಕ

karnataka

ETV Bharat / bharat

75ನೇ ಸ್ವಾತಂತ್ರ್ಯ ದಿನಾಚರಣೆ: ದೇಶದ ಜನತೆಗೆ ಟ್ವೀಟ್ ಮಾಡಿ ಶುಭಾಶಯ ಕೋರಿದ ಪ್ರಧಾನಿ ಮೋದಿ - ಟ್ವೀಟ್ ಮಾಡಿ ಶುಭಾಶಯ

ಆಜಾದಿ ಕಾ ಅಮೃತ್ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೇಶದ ನಾಗರಿಕರಿಗೆ ಶುಭಾಶಯ ಕೋರಿದ್ದಾರೆ.

Prime Minister Narendra Modi wishing independence day
75ನೇ ಸ್ವಾತಂತ್ರ್ಯ ದಿನ: ಟ್ವೀಟ್ ಮಾಡಿ ಶುಭಾಶಯ ಕೋರಿದ ಪ್ರಧಾನಿ ಮೋದಿ

By

Published : Aug 15, 2021, 6:34 AM IST

ನವದೆಹಲಿ:ಭಾರತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್​ ಮಾಡಿದ್ದು, ದೇಶದ ನಾಗರಿಕರಿಗೆಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ.

ಈ ವರ್ಷದ 'ಆಜಾದಿ ಕಾ ಅಮೃತ್ ಮಹೋತ್ಸವ' ದೇಶದ ನಾಗರಿಕರಲ್ಲಿ ಹೊಸ ಶಕ್ತಿ ಮತ್ತು ಪ್ರಜ್ಞೆಯನ್ನು ತರಲಿ. ಜೈ ಹಿಂದ್ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನವದೆಹಲಿಯ ಕೆಂಪುಕೋಟೆ ಬಳಿ ತ್ರಿವರ್ಣ ಧ್ವಜವನ್ನು ಪ್ರಧಾನಿ ಮೋದಿ ಹಾರಿಸಲಿದ್ದು, ಇದೇ ವೇಳೆ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಈ ಅದ್ಧೂರಿ ಸಮಾರಂಭದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಅಧಿಕಾರಿಗಳು ಹಾಗೂ ಈ ಬಾರಿ ಒಲಿಂಪಿಕ್ಸ್​ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ:ಹೈಟಿಯಲ್ಲಿ ಪ್ರಬಲ ಭೂಕಂಪ: ಕನಿಷ್ಠ 227 ಮಂದಿ ಸಾವು, ಸುನಾಮಿ ಎಚ್ಚರಿಕೆ

ABOUT THE AUTHOR

...view details