ಪುದುಚೇರಿ:ಕಾಂಗ್ರೆಸ್ ಆಡಳಿತ ಇರುವ ಪುದುಚೇರಿಯಲ್ಲಿ ಈಗಾಗಲೇ ರಾಜಕೀಯ ಬಿಕ್ಕಟ್ಟು ಉದ್ಭವವಾಗಿದ್ದು, ಬರುವ ಫೆ. 22ರಂದು ಬಹುಮತ ಸಾಬೀತು ಪಡಿಸುವಂತೆ ಅಲ್ಲಿನ ಮುಖ್ಯಮಂತ್ರಿಗೆ ಈಗಾಗಲೇ ಲೆಪ್ಟಿನೆಂಟ್ ಗವರ್ನರ್ ಆದೇಶ ನೀಡಿದ್ದಾರೆ.
ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಫೆ. 25ರಂದು ಒಂದು ದಿನ ಪುದುಚೇರಿ ಪ್ರವಾಸ ಕೈಗೊಳ್ಳುತ್ತಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮಾತನಾಡಲಿದ್ದಾರೆ ಎಂದು ಪುದುಚೇರಿ ಬಿಜೆಪಿ ಅಧ್ಯಕ್ಷ ವಿ ಸಾಮಿನಾಥನ್ ಹೇಳಿದ್ದಾರೆ.