ನವದೆಹಲಿ:ಜಿ20 ಶೃಂಗಸಭೆ ಮತ್ತು 26ನೇ ಕಾನ್ಫರೆನ್ಸ್ ಆಫ್ ಪಾರ್ಟೀಸ್(CoP)ನಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ವಿಶೇಷ ವಿಮಾನದ ಮೂಲಕ ಇಟಲಿಗೆ ಪ್ರಯಾಣ ಬೆಳೆಸಿದರು.
ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಅವರ ಆಹ್ವಾನದ ಮೇರೆಗೆ ರೋಮ್‌ನಲ್ಲಿ ನಡೆಯಲಿರುವ 16ನೇ ಜಿ20 ರಾಷ್ಟ್ರಗಳ ನಾಯಕರ ಶೃಂಗಸಭೆಯಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಈ ವೇಳೆ ಅವರು ರೋಮ್‌ನಲ್ಲಿರುವ ವ್ಯಾಟಿಕನ್ ಸಿಟಿಗೂ ಭೇಟಿ, ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಲಿದ್ದಾರೆ.
ನವದೆಹಲಿಯಿಂದ ಇಟಲಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಯಾಣ ಮೋದಿ ಟ್ವೀಟ್:
ರೋಮ್‌ನಲ್ಲಿ ನಡೆಯಲಿರುವ 16ನೇ ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದೇನೆ. ಈ ಸಂದರ್ಭದಲ್ಲಿ ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆಯಿಂದ ಜಾಗತಿಕ ಆರ್ಥಿಕ ಮತ್ತು ಆರೋಗ್ಯ ಚೇತರಿಕೆ ಬಗ್ಗೆ ಚರ್ಚೆ ನಡೆಸಲಿದ್ದೇನೆ ಎಂದು ತಿಳಿಸಿದ್ದಾರೆ.
ನವೆಂಬರ್ 1-2 ರವರೆಗೆ ಮೋದಿ ಬ್ರಿಟನ್‌ನ ಗ್ಲಾಸ್ಗೋಗೆ ಭೇಟಿ ನೀಡುವ ಕಾರ್ಯಕ್ರಮವಿದೆ. ಈ ವೇಳೆ ಅವರು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಾರೆ.