ಮುಂಬೈ(ಮಹಾರಾಷ್ಟ್ರ): ಬಾಲಿವುಡ್ ನಟ ಸುನಿಲ್ ಶೆಟ್ಟಿ ವಾಸವಿರುವ ಅಪಾರ್ಟ್ಮೆಂಟ್ನಲ್ಲಿ ಕೊರೊನಾ ಪ್ರಕರಣ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಕಟ್ಟಡವನ್ನು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಶನ್ ಸೀಲ್ಡೌನ್ ಮಾಡಿದೆ.
ಸುನಿಲ್ ಶೆಟ್ಟಿ ದಕ್ಷಿಣ ಮುಂಬೈನ ಅಲ್ಟಾಮೌಂಟ್ ರಸ್ತೆಯಲ್ಲಿರುವ 'ಪೃಥ್ವಿ ಅಪಾರ್ಟ್ಮೆಂಟ್'ನಲ್ಲಿ ವಾಸಿಸುತ್ತಿದ್ದಾರೆ. ಆ ಕಟ್ಟಡದಲ್ಲಿ 5 ಕೊರೊನಾ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಬಿಎಂಸಿ ಸೀಲ್ಡೌನ್ ಮಾಡಿದೆ.