ಚೆನ್ನೈ(ತಮಿಳುನಾಡು):ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣ ಮಾಡುವುದು ರಾಷ್ಟ್ರೀಯ ಹಿತಾಸಕ್ತಿಯಲ್ಲ. ಖಾಸಗೀಕರಣವನ್ನು ಹಿಂಪಡೆಯಬೇಕೆಂದು ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತದೆ ಎಂದು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ತಿಳಿಸಿದ್ದಾರೆ.
ತಮಿಳುನಾಡಿನ ಕಾಂಗ್ರೆಸ್ ಶಾಸಕರಾದ ಸೆಲ್ವಪೆರುಂತಗೈ, ರಾಮಚಂದ್ರನ್ ಮತ್ತು ಭಾರತ ಕಮ್ಯುನಿಸ್ಟ್ ಪಕ್ಷದ ಶಾಸಕ ಮರಿಮುತ್ತು ಖಾಸಗೀಕರಣವನ್ನು ವಿರೋಧಿಸಿ, ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಮಂಡನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸ್ಟಾಲಿನ್, ದೇಶದ ಸಾರ್ವಜನಿಕ ವಲಯದ ಉದ್ಯಮಗಳು ನಮ್ಮೆಲ್ಲರ ಆಸ್ತಿ. ಸಾರ್ವಜನಿಕ ಆಸ್ತಿಯನ್ನು ಮಾರಾಟ ಮಾಡುವುದು ರಾಷ್ಟ್ರಕ್ಕೆ ಒಳ್ಳೆಯದಲ್ಲ. ಕೇವಲ ಲಾಭದ ಉದ್ದೇಶ ಕೇಂದ್ರ ಸರ್ಕಾರದ ಗುರಿಯಾಗಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಾರ್ವಜನಿಕ ವಲಯದ ಉದ್ಯಮಗಳಿಂದ ಆರ್ಥಿಕ ಲಾಭವಾಗುವುದರ ಜೊತೆಗೆ ಅತಿ ಸಣ್ಣ ಉದ್ಯಮಗಳಿಗೆ ನೆರವಾಗುತ್ತದೆ. ಖಾಸಗೀಕರಣವನ್ನು ನಾವು ವಿರೋಧಿಸುತ್ತೇವೆ. ಈ ಕುರಿತು ಪ್ರಧಾನಿಗೆ ಪತ್ರ ಬರೆಯಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ಆರ್ಎಸ್ಎಸ್ ಸಹಸಂಘಟನೆಯಿಂದ ಸೆಪ್ಟೆಂಬರ್ 8ರಂದು ದೇಶವ್ಯಾಪಿ ಪ್ರತಿಭಟನೆಗೆ ಕರೆ