ಕರ್ನಾಟಕ

karnataka

ETV Bharat / bharat

ಸಾಮಾನ್ಯ ಕನಿಷ್ಠ ಬೆಂಬಲ ಬೆಲೆ ಬಗ್ಗೆ ಕೇಂದ್ರ ಸುಳ್ಳು ಹೇಳುತ್ತಿದೆ- ಪ್ರಿಯಾಂಕಾ ಗಾಂಧಿ ಕಿಡಿ - ಕೇಂದ್ರದ ವಿರುದ್ಧ ಪ್ರಿಯಾಂಕ ಗಾಂಧಿ ಆರೋಪ

ಇತ್ತೀಚೆಗೆ ಜಾರಿಗೊಳಿಸಲಾಗಿರುವ ಮೂರು ಕೃಷಿ ಸಂಬಂಧಿತ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. 'ದೆಹಲಿ ಚಲೋ' ಮೆರವಣಿಗೆಯ ಭಾಗವಾಗಿ ನವೆಂಬರ್ 26 ರಂದು ರಾಷ್ಟ್ರ ರಾಜಧಾನಿಯನ್ನು ಸಂಪರ್ಕಿಸುವ ಐದು ಹೆದ್ದಾರಿಗಳ ಮೂಲಕ ದೆಹಲಿಯನ್ನು ತಲುಪುದಾಗಿ ಹೇಳಿದ್ದಾರೆ..

Priyanka Gandhi accuses Centre of making false claims on MS
ಪ್ರಿಯಾಂಕ ಗಾಂಧಿ

By

Published : Nov 22, 2020, 7:34 PM IST

ನವದೆಹಲಿ : ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ಹಲವು ಬಿಜೆಪಿ ಆಡಳಿತದ ರಾಜ್ಯಗಳ ವರದಿಗಳಲ್ಲಿ ಕೇಂದ್ರವು ಎಂಎಸ್ಪಿಯನ್ನು ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ತೋರಿಸಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಆಡಳಿತದ ರಾಜ್ಯಗಳ ಅಧಿಕೃತ ವರದಿಗಳ ಪ್ರಕಾರ, ಕೇಂದ್ರ ಸರ್ಕಾರವು ಎಂಎಸ್ಪಿಯನ್ನು ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಇಟ್ಟಿದೆ ಎಂದು ಹೇಳುತ್ತದೆ. ಬಿಜೆಪಿ 'ಬ್ಲ್ಯಾಕ್ ಕಾನೂನು' ಪರಿಚಯಿಸುತ್ತಾ ಎಂಎಸ್ಪಿಯನ್ನು ಹೆಚ್ಚಿಸುವುದಾಗಿ ಹೇಳಿಕೊಳ್ಳುತ್ತಿದೆ. ಉತ್ತರಪ್ರದೇಶದ ವಾಸ್ತವತೆ ಕೇಂದ್ರ ಸರ್ಕಾರದ ಬಗೆಗಿನ ಸತ್ಯವನ್ನು ಬಹಿರಂಗಪಡಿಸುತ್ತದೆ ಎಂದು ಕಾಂಗ್ರೆಸ್ ನಾಯಕಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಪ್ರಿಯಾಂಕಾ ಗಾಂಧಿ ಟ್ವೀಟ್​

ಇತ್ತೀಚೆಗೆ ಜಾರಿಗೊಳಿಸಲಾಗಿರುವ ಮೂರು ಕೃಷಿ ಸಂಬಂಧಿತ ಕಾನೂನುಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. 'ದೆಹಲಿ ಚಲೋ' ಮೆರವಣಿಗೆಯ ಭಾಗವಾಗಿ ನವೆಂಬರ್ 26 ರಂದು ರಾಷ್ಟ್ರ ರಾಜಧಾನಿಯನ್ನು ಸಂಪರ್ಕಿಸುವ ಐದು ಹೆದ್ದಾರಿಗಳ ಮೂಲಕ ದೆಹಲಿಯನ್ನು ತಲುಪುದಾಗಿ ಹೇಳಿದ್ದಾರೆ.

ಹೊಸ ಕೃಷಿ ಕಾನೂನುಗಳ ಮೂಲಕ ಮೋದಿ ಸರ್ಕಾರ ಕೈಗಾರಿಕೋದ್ಯಮಿಗಳಿಗೆ ಸಹಾಯ ಮಾಡುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ. ಪಂಜಾಬ್ ಮತ್ತು ಇತರ ರಾಜ್ಯಗಳಲ್ಲಿ ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೂ, ಕೇಂದ್ರ ಸರ್ಕಾರ ಮಾತ್ರ ರೈತರಿಗೆ ಅನುಕೂಲವಾಗುವ ಕಾನೂನುಗಳನ್ನು ತರಲಾಗಿದೆ ಸಮರ್ಥಿಸಿಕೊಂಡಿದೆ ಎಂದು ಕಿಡಿಕಾರಿದ್ದಾರೆ.

ABOUT THE AUTHOR

...view details