ಉದಯ್ಪುರ(ರಾಜಸ್ಥಾನ):ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಮೂರು ದಿನಗಳ ಚಿಂತನಾ ಶಿಬಿರದಲ್ಲಿ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಮಧ್ಯೆಯೇ ಇದೀಗ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಅಧ್ಯಕ್ಷೆಯಾಗಬೇಕು ಎಂಬ ಕೂಗು ಕೇಳಿ ಬಂದಿದೆ.
ಈ ಬಗ್ಗೆ ಮಾತನಾಡಿರುವ ಪಕ್ಷದ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅತ್ಯಂತ ಜನಪ್ರಿಯ ನಾಯಕಿಯಾಗಿದ್ದಾರೆ. ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.