ಲಖ್ನೋ: ಎಲ್ಲಾ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವಂತೆ ಸುಪ್ರೀಂಕೋರ್ಟ್ ಅನುಮತಿ ನೀಡಿದ ನಂತರ ಉತ್ತರ ಪ್ರದೇಶ ಗ್ರಾಮ ಪಂಚಾಯತಿ ಚುನಾವಣೆಗಳ ಮತ ಎಣಿಕೆ ಭಾನುವಾರ ನಡೆಯುತ್ತಿದೆ.
ಕಾಂಗ್ರೆಸ್ ಹೊರತಾಗಿ ಬಿಜೆಪಿ, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷ ಹಾಗೂ ಚೊಚ್ಚಲ ಬಾರಿಗೆ ಒವೈಸಿ ನೇತೃತ್ವದ ಎಐಎಂಐಎಂ ಮತ್ತು ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಅಭ್ಯರ್ಥಿಗಳು ಕೂಡ ಕಣದಲ್ಲಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪಂಚಾಯತಿ ಚುನಾವಣೆ ಮತದಾನ ಕರ್ತವ್ಯದ ವೇಳೆ 700 ಶಿಕ್ಷಕರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಯುಪಿ ಸರ್ಕಾರ ಮತ್ತು ಯುಪಿ ರಾಜ್ಯ ಚುನಾವಣಾ ಆಯೋಗದ (ಎಸ್‌ಇಸಿ) ವಿರುದ್ಧ ವಾಗ್ದಾಳಿ ನಡೆಸಿದರು.
ಎರಡನೇ ಅಲೆಯ ಬಗ್ಗೆ ಯಾವುದೇ ಆಲೋಚನೆಯಿಲ್ಲದೆ ಯುಪಿ ಸರ್ಕಾರ ಸುಮಾರು 60,000 ಗ್ರಾಮ ಸಭೆಗಳಲ್ಲಿ ಚುನಾವಣೆಗಳನ್ನು ನಡೆಸಿದೆ ಎಂದು ಟ್ವೀಟ್ ಮಾಡಿದ್ದಾರೆ.