ಲಖನೌ :ತಮ್ಮ ಮಕ್ಕಳ ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೇಂದ್ರ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ನನ್ನ ಮಕ್ಕಳ ಇನ್ಸ್ಟಾಗ್ರಾಂ ಹ್ಯಾಕ್ ಮಾಡಿದ್ದಾರೆ: ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಗಂಭೀರ ಆರೋಪ
ಅಖಿಲೇಶ್ ಯಾದವ್ ಫೋನ್ ಟ್ಯಾಪಿಂಗ್ ಆರೋಪದ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಮಕ್ಕಳ ಇನ್ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ.
ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ ಮಕ್ಕಳ ಇನ್ಸ್ಟಾಗ್ರಾಂ ಹ್ಯಾಕ್ : ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದ ರಾಜಧಾನಿ ಲಖನೌ ತಲುಪಿದ್ದಾರೆ. ಈ ಸಂದರ್ಭ ಫೋನ್ ಟ್ಯಾಪಿಂಗ್ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡದೇ, ತಮ್ಮ ಮಕ್ಕಳ ಇನ್ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಿದರು.
ಅಖಿಲೇಶ್ ಯಾದವ್ ಫೋನ್ ಟ್ಯಾಪ್ : ಕಳೆದ ಕೆಳ ದಿನಗಳ ಹಿಂದೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಮ್ಮ ಎಲ್ಲ ಕರೆಗಳನ್ನು ಟ್ಯಾಪ್ ಮಾಡಲಾಗಿದೆ. ಕದ್ದಾಲಿಕೆ ಸಹ ಮಾಡಲಾಗುತ್ತಿದೆ ಎಂದು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.