ನವದೆಹಲಿ: ಉತ್ತರ ಪ್ರದೇಶದಲ್ಲೂ ಎರಡನೇ ಹಂತದ ಕೋವಿಡ್ ಅಬ್ಬರ ಹೆಚ್ಚಾಗಿದ್ದು, ಉತ್ತರ ಪ್ರದೇಶ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅಲ್ಲಿನ ಕಾಂಗ್ರೆಸ್ ಮುಖಂಡರೊಂದಿಗೆ ಚರ್ಚೆ ನಡೆಸಿದರು.
ಅಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸುವ ಉದ್ದೇಶದಿಂದ ವರ್ಚುಯಲ್ ಸಭೆ ನಡೆಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ, ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಮುಖಂಡರೊಂದಿಗೆ ಪ್ರಿಯಾಂಕಾ ಚರ್ಚೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಕಚೇರಿ ಕೆಲ ಅಧಿಕಾರಿಗಳಿಗೆ ಕೋವಿಡ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಹೋಂ ಐಸೋಲೇಷನ್ಗೊಳಗಾಗಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೂ ಇದೀಗ ಕೊರೊನಾ ಸೋಂಕು ದೃಢಪಟ್ಟಿರುವ ಬೆನ್ನಲ್ಲೇ ಪ್ರಿಯಾಂಕಾ ವಾದ್ರಾ ತುರ್ತು ಸಭೆ ನಡೆಸಿದರು.
ಇದನ್ನೂ ಓದಿ: ಕೊರೊನಾ ಮಾರ್ಗಸೂಚಿಗಿಲ್ಲ ಬೆಲೆ.. ಗಂಗಾ ಆರತಿಯಲ್ಲಿ ಸಾವಿರಾರು ಭಕ್ತರು ಭಾಗಿ!
ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸಲು ಕಾಂಗ್ರೆಸ್ ಅಲ್ಲಿನ ಜನರಿಗೆ ಸಹಾಯ ಮಾಡುವಂತೆ ಪ್ರಿಯಾಂಕಾ ಕರೆ ನೀಡಿದ್ದು, ಉತ್ತರ ಪ್ರದೇಶದಲ್ಲಿ ಕೊರೊನಾ ಪರಿಸ್ಥಿತಿ ಈಗಾಗಲೇ ಕೈತಪ್ಪಿ ಹೋಗಿದೆ. ಇದಕ್ಕೆ ಮುಖ್ಯ ಕಾರಣ ಅಲ್ಲಿನ ರಾಜ್ಯ ಸರ್ಕಾರವಾಗಿದೆ ಎಂದಿರುವ ಪ್ರಿಯಾಂಕಾ, ಖಾಸಗಿ ಲ್ಯಾಬ್ಗಳಲ್ಲಿ ಕೋವಿಡ್ ಟೆಸ್ಟ್ ನಡೆಸಲು ಅನುಮತಿ ನೀಡದಿರುವುದು ಇದಕ್ಕೆಲ್ಲ ಮುಖ್ಯ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ. ಇನ್ನು ಕೊರೊನಾ ಸೋಂಕಿಗೊಳಗಾಗಿರುವ ಯೋಗಿ ಆದಿತ್ಯನಾಥ್ ಆದಷ್ಟು ಬೇಗ ಚೇತರಿಸಿಕೊಳ್ಳುವಂತೆ ಪ್ರಿಯಾಂಕಾ ವಾದ್ರಾ ಟ್ವೀಟ್ ಮಾಡಿದ್ದಾರೆ.