ನವದೆಹಲಿ: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳಲ್ಲಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿವೆ.
ಈಗಾಗಲೇ ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ಚುನಾವಣೆ ಗೆಲುವಿಗೆ ತಮ್ಮದೇ ಆದ ತಂತ್ರಗಾರಿಕೆಯನ್ನು ಆರಂಭಿಸಿವೆ. ಈ ನಡುವೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವ ಸಾಧ್ಯತೆ ಇದೆ. ಪ್ರಿಯಾಂಕಾ ಅವರ ನಾಯಕತ್ವದಲ್ಲಿ ಕಾಂಗ್ರೆಸ್ 2022 ರ ಯುಪಿ ವಿಧಾನಸಭಾ ಚುನಾವಣೆಗೆ ಹೋಗುತ್ತದೆ ಎಂದು ಪಕ್ಷದ ಹಿರಿಯ ನಾಯಕ ಹಾಗೂ ಕೇಂದ್ರ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಣಕ್ಕೆ ಇಳಿಯಲಿದೆ. ಅವರು ನಮ್ಮ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ. ಆಕೆಯನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸುವ ಸಾಧ್ಯತೆಗಳೂ ಇವೆ. ಆದರೂ ಈ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಸಲ್ಮಾನ್ ಖುರ್ಷಿದ್ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.