ಪ್ರಯಾಗರಾಜ್ (ಉತ್ತರ ಪ್ರದೇಶ): ಸ್ಥಳೀಯ ಪೊಲೀಸರಿಂದ ಕಿರುಕುಳಕ್ಕೊಳಗಾದ ಮೀನುಗಾರರಿಗೆ ಬೆಂಬಲ ನೀಡುವ ಸಲುವಾಗಿ ಉತ್ತರ ಪ್ರದೇಶದ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಪ್ರಯಾಗರಾಜ್ ತಲುಪಿದ್ದಾರೆ.
ಗ್ರಾಮಸ್ಥರು ಮತ್ತು ಮೀನುಗಾರರ ಕುಟುಂಬ ಸದಸ್ಯರೊಂದಿಗೆ ಪ್ರಿಯಾಂಕಾ ಮಾತುಕತೆ ನಡೆಸಿದರು. ಈ ಹಿಂದೆ ಅವರು ಮೌನಿ ಅಮವಾಸ್ಯೆ ದಿನ ಗಂಗಾನದಿಯ ಸಂಗಮ ಸ್ಥಳವಾದ ಸಂಗಮ್ನಲ್ಲಿ ಪುಣ್ಯಸ್ನಾನ ಮಾಡಿದ ನಂತರ, ಸುಜಿತ್ ನಿಷಾದ್ ಅವರ ದೋಣಿಯಲ್ಲಿ ಪ್ರಯಾಣಿಸಿದ್ದರು. ಇದರ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಿಯಾಂಕಾ ಅವರಿಗೆ ನಿಷಾದ್ ಈ ಸಮಯದಲ್ಲಿ ತಿಳಿಸಿದ್ದರು. ಅಲ್ಲದೇ ಮೀನುಗಾರರ ಮೇಲೆ ಪೊಲೀಸರು ದೌರ್ಜನ್ಯ ಎಸಗಿ, ಅವರ ಬೋಟ್ಗಳನ್ನು ಹಾಳು ಮಾಡುತ್ತಾರೆ ಎಂದು ಹೇಳಿದ್ದರು. ಪೊಲೀಸರ ದಬ್ಬಾಳಿಕೆಯ ವಿರುದ್ಧ ಧ್ವನಿ ಎತ್ತಲು ನಿಷಾದ್ ಪ್ರಿಯಾಂಕಾ ಸಹಾಯ ಕೋರಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.