ನವದೆಹಲಿ: ಶ್ರೀ ರಾಮ್ ಜನಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಸಂಬಂಧಿಸಿದ ಭೂ ವ್ಯವಹಾರದಲ್ಲಿ ಭ್ರಷ್ಟಾಚಾರ ಆರೋಪದ ಬಗ್ಗೆ ಸುಪ್ರೀಂಕೋರ್ಟ್ ತನ್ನ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.
ಒಬ್ಬ ವ್ಯಕ್ತಿಯಿಂದ 2 ಕೋಟಿ ರೂ.ಗೆ ಭೂಮಿ ಖರೀದಿಸಿ ಅದನ್ನು ಕೆಲವೇ ನಿಮಿಷಗಳ ನಂತರ ಟ್ರಸ್ಟ್‌ಗೆ 18.5 ಕೋಟಿ ರೂ.ಗೆ ಮಾರಾಟ ಮಾಡಿದ್ದಾರೆ ಎಂದು ಫೇಸ್‌ಬುಕ್ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ. ಈ ಎಲ್ಲ ಹಣವನ್ನು ದೇವಾಲಯದ ನಿರ್ಮಾಣಕ್ಕಾಗಿ ದೇಣಿಗೆ ರೂಪದಲ್ಲಿ ಭಾರತದ ಜನರು ಹಣ ನೀಡಿದ್ದು, ಇದನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.